ಬೆಂಗಳೂರು: ರಾಜ್ಯ ಸರಕಾರದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿ ರೈತರನ್ನು ಅವಮಾನಿಸುತ್ತಿದ್ದಾರೆ. ಅಂಥ ಸಚಿವರಿಗೆ ಮುಖ್ಯಮಂತ್ರಿಗಳು ಬುದ್ಧಿವಾದ ಹೇಳಲಿ, ತಿದ್ದಿಕೊಳ್ಳದ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.
ಸೋಮವಾರ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂಬ ಶಿವಾನಂದ್ ಪಾಟೀಲರ ಹೇಳಿಕೆ ಖಂಡನಾರ್ಹ ಎಂದರು. ಮತ್ತೆ ಅವರು ರೈತರನ್ನು ಅವಮಾನ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
ಅನ್ನ ಕೊಡುವ ರೈತರ ಬಗ್ಗೆ ಸಚಿವರ, ಸರಕಾರದ ಧೋರಣೆ ಆಕ್ಷೇಪಾರ್ಹ, ದೆಹಲಿ ಪ್ರವಾಸದ ವೇಳೆ ಜಮೀರ್ ಅಹ್ಮದ್ ಅವರ ವರ್ತನೆಯನ್ನೂ ಅವರು ಖಂಡಿಸಿದರು.
ಬರಗಾಲ ಸಂಬಂಧ ರೈತರಿಗೆ ಸಮರ್ಪಕ ಪರಿಹಾರ ನೀಡದ ಸರಕಾರ ಇದು ಎಂದು ನುಡಿದರು. ರೈತರಿಗೆ ಪದೇ ಪದೇ ಅವಮಾನ ಮಾಡುವ ಸರ್ಕಾರ, ಸಚಿವರ ಕ್ರಮವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.
ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಹೆಮ್ಮಿಗೆ ಬಳಿಯ ಜಮೀನಿನಲ್ಲಿ ಹಗಲು ವೇಳೆಯೇ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು…
ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…
ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…