Mysore
29
scattered clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ವಕೀಲರಿಗೆ ಗುಡ್‌ನ್ಯೂಸ್‌ ಕೊಟ್ಟ ಸಚಿವ ಜಮೀರ್‌ ಅಹಮ್ಮದ್‌ ಖಾನ್‌

ಬೆಂಗಳೂರು: ನಗರದಲ್ಲಿ ವಕೀಲರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಭರವಸೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇಲಾಖೆ ಆಯುಕ್ತರೊಂದಿಗೆ ಚರ್ಚಿಸಿ ಗೃಹ ಮಂಡಳಿ ಅಥವಾ ರಾಜೀವ್‌ ಗಾಂಧಿ ವಸತಿ ನಿಗಮದಿಂದ ಬೆಂಗಳೂರಿನಲ್ಲಿ ವಕೀಲರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸಲಾಗುವುದು ಎಂದರು.

ಇದನ್ನೂ ಓದಿ:-ಓದುಗರ ಪತ್ರ: ಮುಚ್ಚಿಸುವವರ‍್ಯಾರು ?

ವಸತಿರಹಿತ ವಕೀಲರಿಗೆ ನಿವೇಶನ ಅಥವಾ ವಸತಿ ಸಂಕೀರ್ಣ ನಿರ್ಮಿಸಿಕೊಡಬೇಕೆಂಬ ಮನವಿಯನ್ನು ಪರಿಗಣಿಸಿ ವಸತಿ ಸಂಕೀರ್ಣ ನಿರ್ಮಾಣ ಮಾಡಲು ಸೂಕ್ತ ಜಮೀನು ಹುಡುಕುವಂತೆ ಗೃಹ ಮಂಡಳಿ ಅಥವಾ ರಾಜೀವ್‌ ಗಾಂಧಿ ವಸತಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಹೇಳಿದರು.

ರಾಜೀವ್‌ ಗಾಂಧಿ ವಸತಿ ನಿಗಮದಿಂದ ಬೆಂಗಳೂರಿನ ಹಲವೆಡೆ ಎರಡು ಬಿ.ಎಚ್.ಕೆ ವಸತಿ ಸಂಕೀರ್ಣ ನಿರ್ಮಾಣ ಮಾಡಲಾಗಿದ್ದು, ವಕೀಲರು ಒಪ್ಪಿದರೆ ಅಲ್ಲಿಯೂ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

Tags:
error: Content is protected !!