Mysore
15
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಕೇಂದ್ರ ವ್ಯವಹಾರ ಸಚಿವರನ್ನು ಭೇಟಿಯಾದ ಸಚಿವ ಜಮೀರ್‌

ನವದೆಹಲಿ: ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಮಂಗಳವಾರ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿದ್ದಾರೆ.

ಮಂಗಳವಾರ ಸಂಸತ್ ಭವನದಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಭೇಟಿ ಮಾಡಿ, 19 ಮೊರಾರ್ಜಿ ವಸತಿ ಶಾಲೆ, 50 ಮೆಟ್ರಿಕ್ ನಂತರದ ಹಾಸ್ಟೆಲ್ ನಿರ್ಮಾಣಕ್ಕೆ 675 ಕೋಟಿ ರೂ.
ನೀಡುವಂತೆ ಮನವಿ ಸಲ್ಲಿಸಿದರು.

ಅಲ್ಲದೆ, ಸಂಸತ್​ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರ ಜೊತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!