ಬೆಂಗಳೂರು : ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಾಗುವುದು ಪಕ್ಕಾ ಆದ ಹಿನ್ನೆಲೆ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್ಗೆ ಖಾದರ್ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಕರೆ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ.
ರಾಜ್ಯಪಾಲರಿಗೆ ಧನ್ಯವಾದ
ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ್ದಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ಗೆ ಯು.ಟಿ. ಖಾದರ್ ಧನ್ಯವಾದ ತಿಳಿಸಿದ್ದಾರೆ. ಲೋಕಭವನಕ್ಕೆ ತೆರಳಿ ಗವರ್ನರ್ ಭೇಟಿಯಾಗಿರುವ ಅವರು, ರಾಜ್ಯಪಾಲರಿಗೆ ರಾಜೀನಾಮೆ ವಿಷಯ ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನು ಈ ಹಿಂದೆ ಆರೋಗ್ಯ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಖಾದರ್ಗೆ ಡಿಕೆಶಿ ಸರ್ಕಾರದಲ್ಲೂ ಅದೇ ಖಾತೆ ಸಿಗಬಹುದೆಂಬ ನಿರೀಕ್ಷೆ ಇದೆ.





