ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ನೆನಪಾಗುವುದೇ ಚುನಾವಣೆ ಸಮಯದಲ್ಲಿ : ಸಿಎಂ

ಹಾನಗಲ್ : (ಚಿಕ್ಕಾಂಶಿ)ಅಲ್ಪಸಂಖ್ಯಾತರ ಬಗ್ಗೆ ಕಾಂಗ್ರೆಸ್ ನವರು ಎಲ್ಲಿಲ್ಲದ ಪ್ರೀತಿ ತೋರಿಸುತ್ತಾರೆ. ಚುನಾವಣೆ ಸಮಯದಲ್ಲಿ ಮಾತ್ರ ಈ ಸಮುದಾಯ ಅವರಿಗೆ ನೆನಪಾಗುತ್ತದೆ. ಉಳಿದ ಸಮಯದಲ್ಲಿ ಅವರನ್ನು ಕಾಂಗ್ರೆಸ್ ಪರಿಗಣಿಸುವುದಿಲ್ಲ ಎಂದು ಬೊಮ್ಮಾಯೊ ನುಡಿದರು.

5 ವರ್ಷ ಅಲ್ಪಸಂಖ್ಯಾತರನ್ನು ಬಾವಿಯಲ್ಲಿಟ್ಟಿರುತ್ತಾರೆ. ಚುನಾವಣೆ ಬಂದಾಗ ಹಗ್ಗ ಕೊಟ್ಟು ಮೇಲೆ ತಂದು ಓಟ್ ಹಾಕಿಸಿಕೊಂಡು ಮತ್ತೆ ಬಾವಿಗೆ ದೂಡುತ್ತಾರೆ. ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ನವರು ದುರುಪಯೋಗ ಮಾಡಿಕೊಂಡಿದ್ದಾರೆ.

ಅಲ್ಪಸಂಖ್ಯಾತರಿಂದಲೇ ಕಾಂಗ್ರೆಸ್ ಅಸ್ಥಿತ್ವದಲ್ಲಿದೆ. ಅವರಿಲ್ಲದಿದ್ದರೆ ಕಾಂಗ್ರೆಸ್ ಪಕ್ಷ ದೇಶದಲ್ಲಿ ಹುಡುಕುವಂತಹ ಪರಿಸ್ಥಿತಿ ಬರುತ್ತಿತ್ತು. ಕಾಂಗ್ರೆಸ್ ಗೆ ಅಲ್ಪಸಂಖ್ಯಾತರ ರಕ್ಷಣೆ ಇದೆ, ಆದರೆ ಕಾಂಗ್ರೆಸ್ ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತದೆ ಎಂದು ಹೇಳುತ್ತಾರೆ ಎಂದು ಅವರು ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದರು.

ಸಂಪೂರ್ಣ ಕರ್ನಾಟಕವನ್ನು ಅಭಿವೃದ್ಧಿ ಮಾಡುವುದೊಂದೇ ನನ್ನ ಕಾಯಕ. ಆ ಗುರಿಯಿಂದ ನಾನು ವಿಮುಖವಾಗುವುದಿಲ್ಲ ಎಂದು ಅವರು ಪ್ರಚಾರದ ವೇಳೆ ಹೇಳಿದರು.

× Chat with us