ಮೈಸೂರು: ರಾಜ್ಯ ಸರ್ಕಾರ ಬೌದ್ಧ ಸಮುದಾಯದ ಜೊತೆಗಿದ್ದು, ಅವರ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ.
ಮೈಸೂರಿನ ಸರಸ್ವತಿಪುರಂನಲ್ಲಿ ಮಹಾಬೋಧಿ ಮೈತ್ರಿ ಮಂಡಲಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನೀಡಲಾದ ಒಂದು ಕೋಟಿ ರೂ ಅನುದಾನದಲ್ಲಿ ನಿರ್ಮಿಸಲಾದ ಸಮುದಾಯ ಭವನವನ್ನು ಸಚಿವ ಜಮೀರ್ ಅಹಮ್ಮದ್ ಖಾನ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಬೌದ್ಧ ಸಮುದಾಯದವರು ರಾಜ್ಯದಲ್ಲಿ ನೆಲೆಸಿರುವುದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಉತ್ತಮ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಇದೇ ಸಂದರ್ಭದಲ್ಲಿ ಮಹಾಬೋಧಿ ಮೈತ್ರಿ ಮಂಡಲದ ಸರಸ್ವತಿಪುರಂ, ಹುಣಸೂರು, ಬೈಲಕುಪ್ಪೆ, ಟಿ.ನರಸೀಪುರ ಶಾಖೆಗಳ ಶಿಕ್ಷಣ ಸಂಸ್ಥೆ ಕಟ್ಟಡ ನಿರ್ಮಾಣ ಹಾಗೂ ಇತರೆ ಸೌಲಭ್ಯಕ್ಕೆ ನೀಡಲಾದ 1.2 ಕೋಟಿ ರೂ ಅನುದಾನದ ಚೆಕ್ಕನ್ನು ಸಚಿವರು ಆನಂದ ಬಂತೇಜಿ ಅವರಿಗೆ ಹಸ್ತಾಂತರ ಮಾಡಿದರು.
ಬಳಿಕ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಅಗತ್ಯವಾದ ಲ್ಯಾಪ್‌ಟಾಪ್, ಡೆಸ್ಕ್ ಟಾಪ್ ಖರೀದಿಸಲು 2 ಲಕ್ಷ ರೂ ನೆರವನ್ನು ವೈಯಕ್ತಿಕವಾಗಿ ನೀಡಿದರು. ಇದೇ ಸಂದರ್ಭದಲ್ಲಿ ಸಚಿವರಿಗೆ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…
ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…