ರಾಯಚೂರು: ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ ಘಟನೆ ನಡೆದಿದೆ. ಪರಿಣಾಮ ಮುಸ್ಲಿಂ ಮುಖಂಡರು ಪಟ್ಟಣದ ಮಾರ್ಕೆಟ್ ಬಳಿಯ ಟಿಪ್ಪು ಸರ್ಕಲ್‌ನಲ್ಲಿ ಘಟನೆ ಖಂಡಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಲಾಗಿದ್ದು, ಕೃತ್ಯವೆಸಗಿದ ಕಿಡಿಗೇಡಿಗಳನ್ನು ಬಂಧಿಸುವಂತೆ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಸದ್ಯ ಸಿರವಾರ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.