ರಾಜ್ಯ

ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅಶ್ಲೀಲ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳು!

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಪೋಸ್ಟರ್ ವಾರ್ ಶುರುವಾದಂತಿದೆ. ಬೆಂಗಳೂರಿನ ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅವಾಚ್ಯ ಪದ ಬಳಕೆ ಮಾಡಿರುವ ಪೋಸ್ಟರ್ ಗಳನ್ನು ಕಿಡಿಗೇಡಿಗಳು ಅಂಟಿಸಿ ಹೋಗಿದ್ದಾರೆ.

ಪೋಸ್ಟರ್ ನಲ್ಲಿ ಏಕವಚನದಲ್ಲಿ ನಿಂದನೆ ಜೊತೆಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ. ಇದೇ ನಿನ್ನ ಸಂಸ್ಕೃತಿ ಎಂದು ಪದ ಬಳಸಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಕೂಡಲೇ ಅಂಟಿಸಿದ್ದ ಪೋಸ್ಟರ್ ತೆರವುಮಾಡಿದ್ದಾರೆ. ಈ ಪೋಸ್ಟರ್ ಬಗ್ಗೆ ಇದೀಗ ಭಾರೀ ಚರ್ಚೆ ಶುರುವಾಗಿದೆ.

ಸೋಮವಾರ ಡಿಸಿಎಂ ಡಿಕೆಶಿ ವಿರುದ್ಧ ರಮೇಶ್ ಜಾರಕಿಜೊಳಿ ಸುದ್ದಿಗೋಷ್ಠಿ ನಡೆಸಿ ಡಿಕೆ ಹೆದರು ಪುಕ್ಕಲ, ಮೋಸಗಾರ ಎಂದು ಜರೆದಿದ್ದರು. ರಾಜ್ಯ ಸರ್ಕಾರದ ಪತನಕ್ಕೆ ಬಿಜೆಪಿ ಸ್ಕೆಚ್ ಹಾಕಿಲ್ಲ. ಆಪರೇಷನ್ ಕಮಲವನ್ನು ನಾವು ಮಾಡ್ತಿಲ್ಲ. ಸುಳ್ಳು ಗ್ಯಾರಂಟಿ ಕೊಟ್ಟಿದ್ದನ್ನು ಈಡೇರಿಸಲು ಆಗದ ಕಾರಣ ಆಪರೇಷನ್ ಕಮಲ ಮಾಡುತ್ತಿದ್ದಾರೆ ಅಂತಾ ಡಿಕೆ ಗ್ಯಾಂಗ್ ಹೇಳ್ತಿದೆ ಎಂದು ಪ್ರತ್ಯಾರೋಪ ಮಾಡಿದ್ದರು. 2019ರಲ್ಲಿ ಅನಿವಾರ್ಯ ಇತ್ತು ಆಪರೇಷನ್ ಮಾಡಿದ್ವಿ. ಅಂದು ಡಿಕೆಶಿಯ ಸರ್ವಾಧಿಕಾರಿ ಧೋರಣೆ ಮತ್ತು ಸೊಕ್ಕಿನಿಂದ ಸರ್ಕಾರವನ್ನು ಬೀಳಿಸಬೇಕಾಯಿತು ಅಂದಿದ್ದರು.

ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಡಿಕೆ ಬೆಂಬಲಿಗರು ಪೋಸ್ಟರ್ ಅಂಟಿಸಿದ್ರಾ ಅನ್ನೋ ಅನುಮಾನ ಶುರುವಾಗಿದೆ. ಸ್ಥಳಕ್ಕೆ ಶೇಷಾದ್ರಿಪುರ ಉಪ ವಿಭಾಗ ಎಸಿಪಿ ಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

lokesh

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

29 mins ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

33 mins ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

38 mins ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

44 mins ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

10 hours ago