Student Death
ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ಶುಕ್ರವಾರ ಮಧ್ಯಾಹ್ನ ಶವವಾಗಿ ಪತ್ತೆಯಾಗಿದ್ದಾರೆ.
ಮೃತಳು ಶ್ರೀನಂದ (15 ವರ್ಷ, ಪಾಲಕ್ಕಾಡ್ ಜಿಲ್ಲೆ, ಕೇರಳ) ಎಂದು ಗುರುತಿಸಲಾಗಿದೆ. ಆಕೆಯ ಕುಟುಂಬದ ಸುಮಾರು 40 ಮಂದಿ ಸದಸ್ಯರೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಮಂಗಳವಾರ ಸಂಜೆ ಸುಮಾರು 5.30ರ ಸುಮಾರಿಗೆ ಜಲಪಾತದ ಬಳಿ ನಾಪತ್ತೆಯಾಗಿದ್ದಳು.
ಕುಟುಂಬದವರು ಸಂಜೆ 8 ರವರೆಗೆ ಸ್ವತಃ ಹುಡುಕಾಟ ನಡೆಸಿ, ನಂತರ ಪೊಲೀಸರಿಗೆ ತಿಳಿಸಿದ್ದರು. ಇದರ ನಂತರ ಪೊಲೀಸ್, ಅರಣ್ಯ ಇಲಾಖೆ, ಎಸ್‌ಡಿಆರ್‌ಎಫ್ ತಂಡಗಳು ತೀವ್ರ ಹುಡುಕಾಟ ನಡೆಸುತ್ತಿದ್ದವು. ಮೂರು ದಿನಗಳ ನಂತರ ಶುಕ್ರವಾರ ಮಧ್ಯಾಹ್ನ ಆಕೆಯ ಮೃತದೇಹ ಪತ್ತೆಯಾಗಿದೆ.
ಪ್ರದೇಶವು ಗುಡ್ಡಗಾಟು ಮತ್ತು ಜಲಪಾತಗಳಿಂದ ಕೂಡಿದ್ದು, ಭೂಪ್ರದೇಶ ಕಠಿಣವಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಸವಾಲು ಎದುರಾಗಿತ್ತು. ಮೃತದೇಹವನ್ನು ಪೊಲೀಸರು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…