Mysore
30
few clouds

Social Media

ಬುಧವಾರ, 28 ಜನವರಿ 2026
Light
Dark

ಬಂಟ್ವಾಳ: ನಿಗೂಢವಾಗಿ ಕಣ್ಮರೆಯಾಗಿದ್ದ ಪಿಯುಸಿ ವಿದ್ಯಾರ್ಥಿ ದಿಗಂತ್ ಪತ್ತೆ

ಬಂಟ್ವಾಳ: ಯಾವುದೇ ಸುಳಿವಿಲ್ಲದೆ ನಿಗೂಢವಾಗಿ ಕಣ್ಮರೆಯಾಗಿದ್ದ ಪರಂಗಿಪೇಟೆಯ ಕಿದೆಬೆಟ್ಟು ನಿವಾಸಿ, ಪಿಯುಸಿ ವಿದ್ಯಾರ್ಥಿ ದಿಗಂತ್ ಸುಮಾರು 10 ದಿನಗಳ ಬಳಿಕ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಆತ ಸಿಕ್ಕಿರುವ ಬಗ್ಗೆ ಪೊಲೀಸರು ಕುಟುಂಬಸ್ಥರಿಗೆ ತಿಳಿಸಿದ್ದಾರೆ ಎಂದು ಕುಟುಂಬ ಮೂಲದಿಂದ ಮಾಹಿತಿ ಲಭ್ಯವಾಗಿದೆ.

ದಿಗಂತ್ ಮಂಗಳೂರಿನ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಫೆ.25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೋದವನು ದಿಢೀರ್ ನಾಪತ್ತೆಯಾಗಿದ್ದ. ಹುಡುಕಾಟ ನಡೆಸಿದ ಬಳಿಕ ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು. ಆ ಬಳಿಕದಿಂದ ಹುಡುಕಾಟ ನಡೆಸಿದರೂ, ಆತನ ನಾಪತ್ತೆಯ ಬಗ್ಗೆ ಯಾವುದೇ ಸುಳಿವು ದೊರಕದೆ ಪೊಲೀಸರಿಗೆ ಈ ಪ್ರಕರಣ ಭಾರೀ ಕಗ್ಗಂಟಾಗಿ ಪರಿಣಮಿಸಿತ್ತು.

 

Tags:
error: Content is protected !!