Mysore
22
scattered clouds

Social Media

ಬುಧವಾರ, 26 ಆಗಸ್ಟ್ 2026
Light
Dark

ದಲಿತರ ಹಣ ದುರ್ಬಳಕೆ: ಜನಾಂದೋಲನಕ್ಕೆ ನಿರ್ಧಾರ ಎಂದ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ದಲಿತರ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದರ ವಿರುದ್ಧ ಜನಾಂದೋಲನ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಇಂದು ಬೆಂಗಳೂರಿನ ಶಾಸಕರ ಭವನದಲ್ಲಿ ದಲಿತ ಸಂಘಟನೆಗಳ ಸಭೆ ಬಳಿಕ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ದಲಿತರನ್ನು ಎತ್ತಿಕಟ್ಟಿ ಅವರನ್ನು ದಮನ ಮಾಡುವಂತ ಕೆಲಸ ಮಾಡುತ್ತಿದ್ದಾರೆ. ದಲಿತರ ಹಣ ಅನ್ಯ ಉದ್ದೇಶಕ್ಕೆ ಬಳಕೆಯಾಗುತ್ತಿದ್ದು, ಇದಕ್ಕಾಗಿ 10 ತಂಡಗಳನ್ನು ರಚಿಸಿ ಇನ್ನೊಂದು ವಾರದ ಒಳಗೆ ರಾಜ್ಯಾದ್ಯಾಂತ ಪ್ರವಾಸ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಾಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ದಲಿತರಿಗೆ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡಲಾಗುವುದು. ಹಾಗೆಯೇ ನ್ಯಾಯ ದೊರಕಿಸಿಕೊಡಲು ರಾಜ್ಯಾದ್ಯಾಂತ ಹೋರಾಟ ಮಾಡಲಾಗುತ್ತದೆ ಎಂದರು.

Tags:
error: Content is protected !!