ರಾಜ್ಯ

ದಲಿತರ ಅನುದಾನ ದುರ್ಬಳಕೆ: ಸಿ.ಸಿ.ಪಾಟೀಲ್‌

ಗದಗ: ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳಿಗೆ ಮೀಸಲಿಟ್ಟ ಹಣವನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಹಾಗೂ ನರಗುಂದ ಬಿಜೆಪಿ ಶಾಸಕ ಸಿ.ಸಿ ಪಾಟೀಲ್‌ ಆರೋಪಿಸಿದ್ದಾರೆ.

ಪತ್ರಿಕಾ ಭವನದಲ್ಲಿ ಇಂದು (ಫೆ.27) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಹಿಂದ ನಾಯಕ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅವರು ದುರ್ಬಲ ವರ್ಗಗಳಿಗೆ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

2023-24 ರಲ್ಲಿ ಎಸ್‌ಸಿಪಿ, ಟಿಎಸ್‌ಪಿನಿಂದ ವಾಪಸ್‌ ತೆಗೆದುಕೊಂಡಿದ್ದ ಹಣ 11,144 ಕೋಟಿ ರೂ, 2024-25ರಲ್ಲಿ 14,488 ಕೋಟಿ ರೂ. ಹಣ ವಾಪಸ್‌ ತೆಗೆದುಕೊಂಡಿದ್ದಾರೆ. ಇಲ್ಲಿಯವರೆಗೆ ಸುಮಾರು 25,000 ಕೋಟಿ ರೂ. ಹಣ ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿದ್ದಾರೆ. ಇದನ್ನು ಯಾವೊಬ್ಬ ದಲಿತ ಸಚಿವರು ಪ್ರಶ್ನಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮುಂಬರುವ ಬಜೆಟ್‌ನಲ್ಲಿಯೂ ಕೂಡಾ ಎಸ್‌ಸಿ, ಎಸ್‌ಟಿ ವರ್ಗಕ್ಕೆ ಮೀಸಲಿಟ್ಟ 15,000 ಕೋಟಿ ರೂ. ಹಣ ಗ್ಯಾರಂಟಿಗೆ ತೆಗೆದುಕೊಳ್ಳುವ ಸಿದ್ದತೆ ನಡೆಸಿದ್ದಾರೆ. ಇದನ್ನು ಕೈಬಿಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಪರಿಷತ್‌ ಸದಸ್ಯ ಎಸ್‌.ವಿ.ಸುಂಕನೂರು ಮಾತನಾಡಿ, ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾನೂನು ಬಾಹಿರ ವರ್ಗಾವಣೆ ಮಾಡುತ್ತಿದೆ. ಇದಕ್ಕೆ ಹಿರಿಯ ಅಧಿಕಾರಿಗಳು, ರಾಜಕೀಯ ವ್ಯಕ್ತಿಗಳೇ ಸಹಕಾರ ನೀಡುತ್ತಿದ್ದಾರೆ. ಇದಕ್ಕೆ ಯಾರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿ ಆಗಿದೆ. ಅದನ್ನು ತುಂಬಿಸಲು ಅನ್ಯ ಮಾರ್ಗ ಹಿಡಿಯುವ ಮೂಲಕ ಎಸ್‌ಸಿ, ಎಸ್‌ಟಿಗೆ ಮೀಸಲಿರಿಸಿದ್ದ ಅನುದಾನವನ್ನು ಸರ್ಕಾ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಎಸ್‌ಸಿ ಘಟಕದ ಅಧ್ಯಕ್ಷ ಮಂಜುನಾಥ ಹುಡಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಮಂಜುನಾಥ ಮುಳಗುಂದ, ಲಿಂಗರಾಜ ಪಾಟೀಲ, ಫಕ್ಕಿರೇಶ ರಟ್ಟಿಹಳ್ಳಿ, ರಾಮಣ್ಣ ಚವಾಣ್‌, ಸುರೇಶ್‌ ಛಲವಾದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

4 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

4 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

5 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

7 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

11 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

11 hours ago