ರಾಜ್ಯ

ಎಸ್‌ಸಿ,ಎಸ್‌ಟಿಗೆ ಮೀಸಲಿಟ್ಟ 50ಸಾವಿರ ಕೋಟಿ ದುರಪಯೋಗ : ತಮ್ಮದೇ ಸರ್ಕಾರದ ವಿರುದ್ಧ ಆರೋಪ

ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು ಆಡಳಿತ ಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಪ್ರಸಂಗ ವಿಧಾನಪರಿಷತ್‍ನಲ್ಲಿ ನಡೆಯಿತು.

ಇದನ್ನೇ ಅಸ್ರ್ತ ಮಾಡಿಕೊಂಡ ಪ್ರತಿಪಕ್ಷ ಬಿಜೆಪಿ ಸದಸ್ಯರು ಈ ಪ್ರಕರಣವನ್ನು ಎಸ್ಐಟಿ ರಚನೆ ಮಾಡಿ ತನಿಖೆಗೆ ಆದೇಶ ನೀಡಬೇಕೆಂದು ಆಗ್ರಹಿಸಿದರು. ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಭಾರೀ ಮಾತಿನ ಚಕಮಕಿ ನಡೆದು ಸದನದಲ್ಲಿ ಒಂದು ಕ್ಷಣ ಕಾವೇರಿದ ವಾಕ್ಸಮರವೂ ನಡೆಯಿತು.

ಪ್ರಶ್ನೊತ್ತರ ಅವಧಿಯಲ್ಲಿ ಕಾಂಗ್ರೆಸ್ ನ ಎನ್.ಎಚ್.ಜಕ್ಕಪ್ಪನವರ್, ಗ್ರಾಮ ಪಂಚಾಯಿತಿಗಳಲ್ಲಿ ಎಸ್ಸಿ, ಎಸ್ಟಿ ವರ್ಗಗಳಿಗೆ ಮೀಸಲಿಟ್ಟ ಅನುದಾನದ ಮೊತ್ತ ಗ್ರಾಮಸಭೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಪ್ರಶ್ನೆ ಮಾಡಿದರು. ಸಚಿವರ ಪರವಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಉತ್ತರಿಸುವ ಮೊದಲೇ ಸುದೀರ್ಘವಾಗಿ ಮಾತನಾಡಿದ ಜಕ್ಕಪ್ಪನವರ್, ಗ್ರಾಮ ಪಂಚಾಯಿತಿಗಳಲ್ಲಿ ಎಸ್ಸಿ/ಎಸ್ಟಿ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನವನ್ನು ಸರಿಯಾಗಿ ಬಳಕೆ ಮಾಡುತ್ತಿಲ್ಲ. ಗ್ರಾಮಸಭೆಗಳನ್ನು ಸಹ ಕರೆದಿಲ್ಲ. ಈ ಸಮುದಾಯದ ಬಗ್ಗೆ ಇಷ್ಟೊಂದು ನಿರ್ಲಕ್ಷ್ಯ ಏಕೆ ಎಂದು ಸರ್ಕಾರದ ವಿರುದ್ಧವೇ ಹರಿಹಾಯ್ದರು.

ಎಸ್ಸಿ/ಎಸ್ಟಿ ಸಮುದಾಯ ಸಂವಿಧಾನ ಬದ್ಧವಾದ ಮೀಸಲಾತಿಯನ್ನು ಸದ್ಬಳಕೆ ಮಾಡಿಕೊಂಡು ಇತರರಂತೆ ಮುಂದೆ ಬರಬೇಕೆಂಬುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸಾಗಿತ್ತು. ಸರ್ಕಾರ ಅನುದಾನವನ್ನು ಮೀಸಲಿಟ್ಟಿದ್ದರೂ ಏಕೆ ಸದ್ಬಳಕೆಯಾಗುತ್ತಿಲ್ಲ? ಗ್ರಾಮ ಪಂಚಾಯಿತಿ ಸಭೆ ಕರೆಯಲು ಇರುವ ಸಮಸ್ಯೆಯಾದರೂ ಏನು ಎಂದು ಪ್ರಶ್ನಿಸಿದರು.

ಇದನ್ನು ಓದಿ: ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ನನಗಿರುವ ಮಾಹಿತಿ ಪ್ರಕಾರ, ಈ ಎರಡೂ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಅನುದಾನದಲ್ಲೆ ಗೋಲ್‍ಮಾಲ್ ಆಗಿದೆ. ಅಂದಾಜು 50 ಸಾವಿರ ಕೋಟಿ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಿದರು.

ಸದಸ್ಯರು ಈ ಆರೋಪ ಮಾಡುತ್ತಿದ್ದಂತೆ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸದಸ್ಯರಾದ ರವಿಕುಮಾರ್, ಪೂಜಾರ್, ಹೇಮಲತಾ ನಾಯಕ್ ಮತ್ತಿತರರು ಇದು ಗಂಭೀರವಾದ ಆರೋಪ. ಸರ್ಕಾರದ ಮೇಲೆಯೇ ಸದಸ್ಯರೊಬ್ಬರು ಇಷ್ಟು ದೊಡ್ಡ ಮೊತ್ತದ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ತಕ್ಷಣವೇ ಇದನ್ನು ತನಿಖೆಗೆ ವಹಿಸಿ ಎಂದು ಒತ್ತಾಯಿಸಿದರು.

ಆಗ ಸದಸ್ಯರ ಪರವಾಗಿ ಎದ್ದು ನಿಂತ ಸದಸ್ಯ ಶಿವಕುಮಾರ್, ಸದಸ್ಯರು ಈ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪ ಮಾಡಿಲ್ಲ. ಕಳೆದ 10 ವರ್ಷಗಳ ಅವಧಿಯಲ್ಲಿ ಆಗಿದೆ ಎಂದು ಹೇಳಿದ್ದಾರೆ. 2015 ರಿಂದಲೂ ಇದು ನಡೆದಿದೆ ಎಂಬುದು ಅವರ ಆರೋಪ ಎಂದು ಸಮರ್ಥನೆ ಮಾಡಿಕೊಂಡರು.

ಆಗ ಪ್ರತಿಪಕ್ಷದ ಸದಸ್ಯರು ಎಸ್‍ಐಟಿ ತನಿಖೆಯಾಗಲೇಬೇಕು, ಇಷ್ಟು ದೊಡ್ಡ ಮಟ್ಟದ ಹಗರಣ ನಡೆಸಿದವರ ಮೇಲೆ ತನಿಖೆಯಾಗಲೇಬೇಕು. ತನಿಖೆಗೆ ಸಭಾಪತಿಯವರು ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಮತ್ತೆ ಮಾತಿನ ಚಕಮಕಿ ನಡೆಯಿತು. ವಿಷಯ ಪ್ರಸ್ತಾಪಿಸಲು ಪುನಃ ಛಲವಾದಿ ನಾರಾಯಣಸ್ವಾಮಿ ಮುಂದಾದಾಗ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹಮದ್ ಅವರು ಪ್ರಶ್ನೋತ್ತರ ಅವಧಿಯಲ್ಲಿ ಚರ್ಚೆಗೆ ಅವಕಾಶವಿದೆಯೇ? ಇದ್ದರೆ ಯಾವ ನಿಯಮದಡಿ ಕೊಡುತ್ತಿರಿ? ಈ ರೀತಿ ಸದಸ್ಯರು ಸದನದಲ್ಲಿ ವರ್ತಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿಪಿಸಿದರು. ಬಳಿಕ ಸಭಾಪತಿಯವರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಆಂದೋಲನ ಡೆಸ್ಕ್

Recent Posts

ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿ: ಕಾರಣ ಇಷ್ಟೇ

ಬೆಂಗಳೂರು: ಧುರಂಧರ್‌-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…

7 mins ago

ರಾಜ್ಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…

12 mins ago

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

2 hours ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

2 hours ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

3 hours ago