ಶಾಸಕಿ ಅನಿತಾ ಕುಮಾರಸ್ವಾಮಿಗೆ ಕೊರೋನಾ ಪಾಸಿಟಿವ್

ರಾಮನಗರ: ಶಾಸಕಿ ಅನಿತಾ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಇಂದು ಬೆಳಗ್ಗೆ ವರದಿ ಬಂದಿದ್ದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಚಿ ಸಚಿವ ಎಚ್.ಎಮ್. ರೇವಣ್ಣ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎಚ್. ಶಿವಶಂಕರರೆಡ್ಡಿ, ಮಾಜಿ ಶಾಸಕಿ, ಕಾಂಗ್ರೆಸ್ ನಾಯಕಿ ಮಲ್ಲಾಜಮ್ಮ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕರಿಗೆ ಕೊರೊನಾ ಸೋಂಕು ತಗುಲಿದೆ.

ರಾಜ್ಯದಲ್ಲಿ ನಿನ್ನೆ ಒಂದೇ ದಿನ 28,723 ಕೇಸ್ ಪತ್ತೆಯಾಗಿದ್ರೆ 14 ಜನ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಇದರಲ್ಲಿ ಬಹುಪಾಲು, ಅಂದ್ರೆ.. ಶೇ.70ಕ್ಕೂ ಹೆಚ್ಚು ಸೋಂಕುಗಳು ಕಂಡುಬರುತ್ತಿರುವುದು ರಾಜಧಾನಿ ಬೆಂಗಳೂರಿನಲ್ಲೇ.. ಈ ಮೂಲಕ ರಾಜ್ಯದಲ್ಲಿ 1 ಲಕ್ಷದ 40 ಸಾವಿರಕ್ಕೂ ಹೆಚ್ಚು ಆ್ಯಕ್ಟೀವ್ ಕೇಸ್ಗಳಿವೆ. ಪಾಸಿಟಿವಿಟಿ ರೇಟ್ ಶೇ.12.98ರಷ್ಟಿದೆ.

× Chat with us