ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ.ಆರ್.ಪಾಟೀಲ್ ರಾಜೀನಾಮೆ ನೀಡಿದ್ದಾರೆ.
ಸದಾ ಸರ್ಕಾರದ ನಡೆಗಳ ಕುರಿತು ಹಾಗೂ ಸಿಎಂ, ಸಚಿವರ ಧೋರಣೆಗಳನ್ನು ಪ್ರಶ್ನೆ ಮಾಡುತ್ತಿದ್ದ ಪಾಟೀಲ್, ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದ್ದರು.
ಇದರ ಜೊತೆಗೆ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಾರದೇ ಇರುವ ಕುರಿತು ಅವರು ಅಸಮಾಧಾನಗೊಂಡಿದ್ದರು.
ಈ ಹಿನ್ನೆಲೆಯಲ್ಲಿ ಅವರು ಈಗ ಸಿಎಂ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ.
ಸಿಎಂ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಕೇವಲ ಶಾಸಕರಾಗಿ ಮುಂದುವರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಮೂಲಕ ಪರೋಕ್ಷವಾಗಿ ಮತ್ತೊಮ್ಮೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಪಾಟೀಲ್ ಅವರು ಈ ಹಿಂದೆ ಸಹ ಸರ್ಕಾರದ ವಿರುದ್ಧ ಬಹಿರಂ ಗ ಪತ್ರ ಬರೆದಿದ್ದರು.
ಇದಲ್ಲದೇ, ಈ ಹಿಂದೆ ನಡೆದ ಕಾಂಗ್ರೆಸ್ ಸಿಎಲ್‌ಪಿ ಸಭೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿ ಹೊರನಡೆದು ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು.