Mysore
30
scattered clouds

Social Media

ಭಾನುವಾರ, 09 ಫೆಬ್ರವರಿ 2025
Light
Dark

ರಾಜೀನಾಮೆ ಬೆನ್ನಲ್ಲೇ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿ.ಆರ್.ಪಾಟೀಲ್‌ ಅಸಮಾಧಾನ

ಕಲಬುರ್ಗಿ: ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ ಎಂದು ಶಾಸಕ ಬಿ.ಆರ್.ಪಾಟೀಲ್‌ ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಕಲಬುರ್ಗಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ. ನಾನು ರಾಜೀನಾಮೆ ನೀಡಿದ್ದು ವಿಶೇಷ ಬೆಳವಣಿಗೆ ಅಲ್ಲ. ಯಾವತ್ತೋ ರಾಜೀನಾಮೆ ನೀಡಬೇಕಿತ್ತು. ಆದರೆ ನಿನ್ನೆ ರಾಜೀನಾಮೆ ನೀಡಿದ್ದೇನೆ ಎಂದರು.

ಇನ್ನು ನಾನು ಸಿಎಂ ಸಿದ್ದರಾಮಯ್ಯರಿಗೆ ಎರಡನೇ ಬಾರಿಗೆ ಪತ್ರ ಬರೆದಿದ್ದೇನೆ. ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಒತ್ತಡದಲ್ಲಿದ್ದಾರೆ. ಕೊನೆಯವರೆಗೂ ನಿಮ್ಮ ಸ್ನೇಹಿತನಾಗಿ ಉಳಿಯುತ್ತೇನೆ ಎಂದಿದ್ದಾರೆ ಎಂದರು.

ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನವೇ ಸಿಗುತ್ತಿಲ್ಲ. ಆದ್ದರಿಂದ ಅಭಿವೃದ್ಧಿ ಕಾರ್ಯಗಳು ನಿಂತುಹೋಗಿವೆ. ಈ ಬಗ್ಗೆ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಎಲ್ಲವನ್ನೂ ಹೇಳಿದ್ದೇನೆ ಎಂದು ಮಾಹಿತಿ ನೀಡಿದರು.

Tags: