ಬೆಂಗಳೂರು: ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆ ಕೇವಲ ಪಾಸಿಂಗ್ ಸ್ಟೇಟಮೆಂಟ್ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಇಂದು (ಫೆ.4) ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೆನ್ನಪಟ್ಟಣದಲ್ಲಿ ಮತದಾರರಿಗೆ ಅಭಿನಂದನಾ ಸಮಾವೇಶದ ಸಂದರ್ಭ ಶಾಸಕ ಬಾಲಕೃಷ್ಣ ಸ್ವಾಗತ ಮಾಡುವಾಗ ಈ ರೀತಿಯ ಹೇಳಿಕೆ ನೀಡಿದ್ದಾರೆ ಅಷ್ಟೇ. ಇದರ ಹಿಂದೆ ಯಾವುದೇ ರಾಜಕೀಯ ದುರುದ್ದೇಶವಿಲ್ಲ ಎಂದು ತಿಳಿಸಿದರು.
ಶಾಸಕ ಬಾಲಕೃಷ್ಣ ಅವರು ಡಿಕೆ ಶಿವಕುಮಾರ್ ಅವರ ಮೇಲಿನ ಪ್ರೀತಿಯಿಂದಾಗಿ ಈ ರೀತಿ ಹೇಳಿಕೆ ನೀಡಿದ್ದಾರೆಯೇ ಹೊರತು ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಭಿಪ್ರಾಯ ಉಂಟುಮಾಡಬೇಕು ಎಂಬ ದುರುದ್ದೇಶದಿಂದ ಅವರು ಹೇಳಿಕೆ ನೀಡಿಲ್ಲ. ಅದೊಂದು ಕೇವಲ ಪಾಸಿಂಗ್ ಸ್ಟೇಟಮೆಂಟ್ ಎಂದು ಹೇಳಿದರು.