ರಾಜ್ಯ

ಬಿಜೆಪಿಯಿಂದ ಆರು ವರ್ಷಗಳ ಕಾಲ ಶಾಸಕ ಯತ್ನಾಳ್‌ ಉಚ್ಛಾಟನೆ

ಬೆಂಗಳೂರು: ರಾಜ್ಯ ನಾಯಕತ್ವದ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿದ್ದ ಬಿಜೆಪಿ ರೆಬೆಲ್‌ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ರನ್ನು ಆರು ವರ್ಷಗಳ ಕಾಳ ಉಚ್ಛಾಟಿಸಿ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.

ಬಿಜೆಪಿ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಈ ನಿರ್ಧಾರ ಕೈಗೊಂಡಿದೆ. ತಕ್ಷಣವೇ ಈ ನಿರ್ಧಾರ ಜಾರಿಗೆ ಬಂದಿದೆ.

ಮಾಜಿ ಸಿಎಂ ಬಿ.ಎಸ್.‌ಯಡಿಯೂರಪ್ಪ ಕುಟುಂಬದ ವಿರುದ್ಧ ಪದೇ ಪದೇ ಹೇಳಿಕೆ ನೀಡಿ, ಬಿಜೆಪಿ ಶಿಸ್ತು ಸಮಿತಿ ನೋಟಿಸ್‌ಗೂ ಕ್ಯಾರೇ ಎನ್ನದ ಶಾಸಕ ಯತ್ನಾಳ್‌ರನ್ನು ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ಈ ಮೂಲಕ ಬಿಜೆಪಿ ರೆಬೆಲ್‌ ನಾಯಕನಿಗೆ ಹೈಕಮಾಂಡ್‌ ಬಿಗ್‌ ಶಾಕ್‌ ನೀಡಿದ್ದು, ಯತ್ನಾಳ್‌ ಮುಂದಿನ ನಡೆಯೇನು ಎಂಬುದೇ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

8 mins ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

15 mins ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

19 mins ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

22 mins ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

24 mins ago

ಮೈಸೂರಿನಲ್ಲಿ ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್ ಅಳವಡಿಕೆ ಪ್ರಗತಿ : 1,100 ಕಿ.ಮೀ ವರೆಗೆ ಕೇಬಲ್ ಅಳವಡಿಕೆ

ಮೈಸೂರು : ನಗರದಲ್ಲಿ ಓವ‌ರ್ ಹೆಡ್ (ಮೇಲ್ಬಾಗದ) ವಿದ್ಯುತ್ ಮಾರ್ಗವನ್ನು ತೆರವು ಮಾಡಿ ವಿದೇಶಿ ಮಾದರಿಯಲ್ಲಿ ಭೂಗತಕೇಬಲ್‌ಗಳಾಗಿ ಪರಿವರ್ತಿಸುವ 408…

32 mins ago