ಬೆಂಗಳೂರು: ನನಗೆ ಜನರೇ ಹೊಸ ಪಕ್ಷ ಕಟ್ಟುವಂತೆ ಸಲಹೆ ನೀಡುತ್ತಿದ್ದಾರೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನನ್ನು ಉಚ್ಛಾಟನೆ ಮಾಡಲು ಯಡಿಯೂರಪ್ಪ ಅವರ ಮಗ ವಿಜಯೇಂದ್ರನೇ ಕಾರಣ. ಹೈಕಮಾಂಡ್ ಮೇಲೆ ಒತ್ತಡ ತಂದು ಉಚ್ಛಾಟನೆ ಮಾಡಿಸಿದ್ದಾನೆ ಎಂದು ಗಂಭೀರ ಆರೋಪ ಮಾಡಿದರು.
ಇನ್ನು ಯಾವ ವೀರಶೈವ ಲಿಂಗಾಯತರು ಯಡಿಯೂರಪ್ಪ ಅವರ ಜೊತೆಗಿಲ್ಲ. ಬಿಎಸ್‌ವೈ ಕುಟುಂಬವನ್ನು ಹೊರಗೆ ಇಡುವವರೆಗೂ ನಾನು ಬಿಡುವುದಿಲ್ಲ ಎಂದು ಶಪಥ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಮತ್ತೆ ದೆಹಲಿಗೆ ಹೋಗಲ್ಲ. ಇಡೀ ರಾಜ್ಯ ಸುತ್ತುತ್ತೇನೆ. ಜನರೇ ಹೊಸ ಪಕ್ಷ ಕಟ್ಟಲು ಸಲಹೆ ಕೊಡುತ್ತಿದ್ದಾರೆ. ರಾಘವೇಂದ್ರ ಹೊರತುಪಡಿಸಿ ಎಲ್ಲಾ ಸಂಸದರೂ ಕೂಡ ನಮ್ಮ ಪರ ಇದ್ದಾರೆ ಎಂದರು.





