ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿರುವ ಘಟನೆಯನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದ ಬಗ್ಗೆ ಪೊಲೀಸರು ನಿರಾಕರಿಸಿದ್ದರೂ ರಾಜಕೀಯ ಪ್ರಚಾರಕ್ಕಾಗಿ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದಾರೆ. ಒಂದು ಲಕ್ಷ ಜನರು ಸೇರಿದ್ದನ್ನು ಇವರಿಗೆ ನಿಯಂತ್ರಿಸಲು ಆಗಲಿಲ್ಲ. ಯಾವುದೇ ವ್ಯವಸ್ಥೆಯನ್ನು ಮಾಡದೇ ಡಿಕೆಶಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ತಮ್ಮ ಪ್ರಚಾರಕ್ಕಾಗಿ, ವೋಟ್ ಬ್ಯಾಂಕ್‌ಗಾಗಿ ಕಾರ್ಯಕ್ರಮ ಮಾಡಿ ಅಮಾಯಕರ ಸಾವಿಗೆ ಕಾರಣರಾಗಿದ್ದಾರೆ ಎಂದು ಕಿಡಿಕಾರಿದರು.
ಇದನ್ನೂ ಓದಿ:- ಕಾಲ್ತುಳಿತ ಪ್ರಕರಣ: ಮೃತರ ಮಾಹಿತಿ ಪ್ರಕಟಿಸಿದ ರಾಜ್ಯ ಸರ್ಕಾರ
ಇನ್ನು ಮೃತರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ನೀಡಲಿ. ದುರಂತದ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.





