ರಾಜ್ಯ

ಸಿಎಂ ಸಿದ್ದರಾಮಯ್ಯನವರು ಸರ್ಕಾರದ ಭ್ರಷ್ಟಾಚಾರವನ್ನು ಸರಿಪಡಿಸಬೇಕು: ಸಿ.ಎನ್‌.ಅಶ್ವಥ್‌ ನಾರಾಯಣ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪರವರ ವಿರುದ್ಧದ ರಾಜಕೀಯ ದ್ವೇಷವನ್ನು ಬಿಟ್ಟು ಸರ್ಕಾರದ ಭ್ರಷ್ಟಾಚಾರವನ್ನು ಸರಿಪಡಿಸಬೇಕು ಎಂದು ಬಿಜೆಪಿ ಶಾಸಕ ಸಿ.ಎನ್‌.ಅಶ್ವಥ್‌ ನಾರಾಯಣ್‌ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ನ.29) ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ ನೇತೃತ್ವದ ಸರ್ಕಾರದಲ್ಲಿ ಪ್ರತಿನಿತ್ಯ ಬೆಳಿಗ್ಗೆ ಎದ್ದರೆ ಸಾಕು ಭ್ರಷ್ಟಾಚಾರ ಹಾಗೂ ಸರ್ಕಾರಿ ಅಧಿಕಾರಿಗಳ ಆತ್ಮಹತ್ಯೆ ಆಗುತ್ತಿದೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿ ತಮ್ಮ ಸರ್ಕಾರದ ಭ್ರಷ್ಟಾಚಾರವನ್ನು ಸರಿಪಡಿಸಿಕೊಳ್ಳಬೇಕು. ಅದನ್ನು ಬಿಟ್ಟು ಬಿ.ಎಸ್‌.ಯಡಿಯೂರಪ್ಪ ಅವರ ಮೇಲೆ ಸಚಿವ ಸಂಪುಟ ಸಭೆಯಲ್ಲಿ ತನಿಖೆ ಅಗತ್ಯವೆಂದು ಪ್ರಯತ್ನಿಸುತ್ತಿರುವುದು ಖಂಡನೀಯವಾಗಿದೆ ಎಂದು ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಮೇಲೆ ತನಿಖೆ ಆರಂಭಿಸಿದ್ದಾರೆ. ಆದರೆ ಈಗಾಗಲೇ ತನಿಖೆಗೆ ನಾಗಮೋಹನ್‌ ದಾಸ್‌ ಸಮಿತಿ ಮಾಡಿ ಒಂದೂವರೆ ವರ್ಷ ಆಗಿದೆ. ಈ ಮಧ್ಯೆ ಬಿಎಸ್‌ವೈ ವಿರುದ್ಧ ಸರ್ಕಾರ ತನಿಖೆ ಮಾಡಲೇಬೇಕೆದು ಚಿಂತಿಸಿ ಎಸ್‌ಐಟಿ ತನಿಖೆಗಳು ಆಗುವಂತೆ ಮಾಡಿದೆ. ಹೀಗಾಗಿ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ
ಎಂಬಂದು ಸ್ಪಷ್ಟವಾಗಿ ಕಾಣುತ್ತಿದ್ದು, ದ್ವೇಷದ ರಾಜಕೀಯ ಬಿಟ್ಟು ಆಡಳಿತದಲ್ಲಿ ಹೇಗೆ ಒಳ್ಳೆಯ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂಬುದರ ಕುರಿತು ಚಿಂತಿಸಬೇಕು ಎಂದು ಎಚ್ಚರಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಮಡಿಕೇರಿ | ಕಾರಿನ ಮೇಲೆ ಉರುಳಿ ಬಿದ್ದ ಪ್ರವಾಸಿಗರ ಬಸ್

ಮಡಿಕೇರಿ : ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ…

4 mins ago

ಎಲ್‌ಪಿಜಿ ಹೊತ್ತ ಮತ್ತೊಂದು ಹಡಗು ಭಾರತದತ್ತ

ಅನುಮತಿಗಾಗಿ ಕಾಯುತ್ತಿರುವ ಮತ್ತೆರಡು ಹಡಗುಗಳು ಹೊಸದಿಲ್ಲಿ : ಸುಮಾರು 46,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ಇಂಧನ ಹೊತ್ತ ದೊಡ್ಡ ದ್ರವೀಕೃತ…

39 mins ago

ಐಪಿಎಲ್‌ ಟಿಕೆಟ್‌ಗಾಗಿ ಸ್ವೀಕರ್‌ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

ಬೆಂಗಳೂರು : ರಾಜ್ಯದಲ್ಲಿ ಗ್ಯಾಸ್ ಸಿಗದೆ ಆಟೋ ಚಾಲಕರು ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದರೆ, ಜನಪ್ರತಿನಿಧಿಗಳಾದ ಶಾಸಕರು ಮಾತ್ರ ಐಪಿಎಲ್ ಟಿಕೆಟ್‌ಗಳ…

2 hours ago

ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

3 hours ago

ಗ್ಯಾಸ್‌ ಸಿಗದೇ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ಆಕ್ರೋಶ

ಬೆಂಗಳೂರು: ಗ್ಯಾಸ್‌ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ…

3 hours ago

ರಾಜ್ಯದ ಅಭಿವೃದ್ಧಿಗೆ ಕೇಂದ್ರದ 5 ಸಚಿವರ ಕೊಡುಗೆ ಶೂನ್ಯವಾಗಿದೆ: ಸಚಿವ ಚಲುವರಾಯಸ್ವಾಮಿ ಆರೋಪ

ದಾವಣಗೆರೆ: ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುವ ಜೊತೆಗೆ ಅಭಿವೃದ್ಧಿಗೂ ಪ್ರತಿ ಕ್ಷೇತ್ರಕ್ಕೆ ನೂರು ಕೋಟಿ ರೂ.ಗಳಿಗೆ ಹೆಚ್ಚಿನ ಅನುದಾನವನ್ನು ಸಿದ್ದರಾಮಯ್ಯ ಅವರು…

4 hours ago