ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನಿನ ಸಂಕಷ್ಟ ಎದುರಾಗಿದೆ.
ನೆರೆಯ ಆಂಧ್ರಪ್ರದೇಶದ ಅನುಮತಿ ಪಡೆದುಕೊಂಡು ಕರ್ನಾಟಕದ ಗಡಿ ಒತ್ತುವರಿ ಮಾಡಿದ ಪ್ರಕರಣದಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಜನಾರ್ಧನ ರೆಡ್ಡಿ ಕಾನೂನು ಬಾಹಿರವಾಗಿ ಗಡಿ ಒತ್ತುವರಿ ಮಾಡಿದ್ದಾರೆ ಎಂಬ ಆರೋಪಕ್ಕೆ ಸಿಲುಕಿದ್ದಾರೆ. ಒಂದು ವೇಳೆ ಸುಪ್ರೀಂಕೋರ್ಟ್ ಈ ವರದಿಯನ್ನು ಅಂಗೀಕರಿಸಿದರೆ ರೆಡ್ಡಿಗೆ ಮತ್ತೆ ಕಾನೂನಿನ ಕುಣಿಕೆ ಬಿಗಿಯಾಗಲಿದೆ.
ಅಧಿಕಾರಿಗಳ ತಂಡ ಆಂಧ್ರದ ರಾಯದುರ್ಗ ತಾಲ್ಲೂಕಿನ ಮಲಪನಗುಡಿ ಗ್ರಾಮಕ್ಕೆ ಭೇಟಿ ನೀಡಿ ಡ್ರೊ?ನ್ ಮೂಲಕ ಸರ್ವೇ ನಡೆಸಿತ್ತು. ಇದರಲ್ಲಿ ಅಂತರಗಂಗಮ ಹೆಸರಿನ 68.50 ಹೆಕ್ಟೇರ್, ಸಿದ್ದಾಪುರದಲ್ಲಿನ ಬಿಐಒಸಿ ಕಂಪನಿಯ 27.12 ಹೆಕ್ಟೇರ್, ವೈ. ಮಹಾಬಲೇಶ್ವರಪ್ಪ ಸನ್ಸ್ ಹೆಸರಿನ 20.24 ಹೆಕ್ಟೇರ್, ಒಬಳಾಪುರಂ ಗ್ರಾಮದಲ್ಲಿನ ಒಎಂಸಿ ಹೆಸರಿನ 25.98 ಹೆಕ್ಟೇರ್, ಒಎಂಪಿ2 ಹೆಸರಿನ 39.50 ಹೆಕ್ಟೇರ್ ಪ್ರದೇಶಗಳಲ್ಲಿ ಗಣಿ ಗುತ್ತಿಗೆ ಸಂಬಂಧ ಎರಡು ಹಂತಗಳಲ್ಲಿ ಸರ್ವೇ ಮಾಡಿತ್ತು.
ಈ ಸರ್ವೇಯಲ್ಲಿ ಜನಾರ್ಧನ್ ರೆಡ್ಡಿ ಒಡೆತನದ ಓಎಂಸಿ 2 ಹೆಸರಿನಲ್ಲಿ 39.50 ಹೆಕ್ಟೇರ್, ಅಂತರಗಂಗಮ ಹೆಸರಿನ 68.50 ಹೆಕ್ಟೇರ್ ಪ್ರದೇಶಗಳಲ್ಲಿ ಗಣಿಗುತ್ತಿಗೆ ಪ್ರದೇಶ ಮತ್ತು ಗಡಿಗಳ ಹೊಂದಾಣಿಕೆ ಆಗಿಲ್ಲ. ಈ ಕಂಪನಿಗಳು ಕರ್ನಾಟಕ ರಾಜ್ಯದಲ್ಲಿ ಅತಿಕ್ರಮಣ ಮಾಡಿವೆ ಎಂದು ವರದಿ ಸಲ್ಲಿಕೆ ಮಾಡಿದೆ.
ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಈ ಹಿಂದೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಅತಿಕ್ರಮಣ ನಡೆಸಿ ಒತ್ತುವರಿ ಮಾಡಿಕೊಂಡಿದೆ ಎಂದು ವರದಿಯನ್ನು ನೀಡಿದೆ. ಈ ವರದಿಯನ್ನು ನ್ಯಾಯಾಲಯ ಅಂಗೀಕರಿಸಿ ವಿಚಾರಣೆಗೆ ಒಳಪಡಿಸಿದರೆ ರೆಡ್ಡಿಗೆ ಪುನಃ ಕಾನೂನಿನ ಸಂಕಷ್ಟ ಎದುರಾಗಲಿದೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…