ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ… ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ.ಯಿಂದ ಬಂಧಿತನಾಗಿ ಅಮಾನತುಗೊಂಡು ಜೈಲಿನಲ್ಲಿರುವ ಆರೋಪಿಗೆ ಮುಂಬಡ್ತಿ ನೀಡಲು ಲಂಚ ಕೊಟ್ಟಿದ್ದಾರೆ ಎಂದರೆ ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನಿದೆ ಎಂದು ಪ್ರಶ್ನಿಸಿದರು.
ನಟೇಶ್‍ಗೆ ಪ್ರಮೋಷನ್ ಕೊಡಲು ಲಂಚ ಕೊಟ್ಟಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಆತ ಅತ್ಯಂತ ಭ್ರಷ್ಟ ಅಧಿಕಾರಿ. ಅಂಥವನನ್ನು ರಕ್ಷಣೆ ಮಾಡುವ ಕೆಲಸ ಇದೇ ಸಿದ್ದರಾಮಯ್ಯನವರಿಂದ ನಡೆಯಿತು. ಇದು ಅವರ ಆಡಳಿತ ವೈಖರಿ ಎಂದು ವ್ಯಂಗ್ಯವಾಡಿದರು.
ಇಂಥ ಭ್ರಷ್ಟನನ್ನು ಕಾಂಗ್ರೆಸ್ ಸರ್ಕಾರ ಬಂಧಿಸಲಿಲ್ಲ. ಆತನ ಬಂಧನವಾದರೆ ನನ್ನ ಬುಡಕ್ಕೆ ಬರಬಹುದೆಂದು ಸಿದ್ದರಾಮಯ್ಯ ಎಲ್ಲಾ ಹಂತದಲ್ಲೂ ರಕ್ಷಣೆ ಮಾಡಿದರು. ಮೈಸೂರನ್ನು ಸಂಪೂರ್ಣವಾಗಿ ಹಾಳು ಮಾಡಿದ್ದೀಯಾ, ತನಿಖೆ ನಡೆಯುತ್ತಿದ್ದರೂ ಒಬ್ಬ ಅಧಿಕಾರಿಗೆ ಮುಂಬಡ್ತಿ ನೀಡಿರುವ ನಿದರ್ಶನ ದೇಶದಲ್ಲಿ ಎಲ್ಲಿಯಾದರೂ ಇದೆಯೇ ಎಂದು ಪ್ರಶ್ನಿಸಿದರು.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…