Mysore
20
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ ಎಚ್.ವೈ.ಮೇಟಿ ಅಂತ್ಯಕ್ರಿಯೆ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಕಾಂಗ್ರೆಸ್‌ ಶಾಸಕ ಎಚ್.ವೈ.ಮೇಟಿ ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುತ್ತದೆ.

ಹುಟ್ಟೂರು ಬಾಗಲಕೋಟೆಯಲ್ಲಿ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗುತ್ತದೆ.

ಇದನ್ನು ಓದಿ: ಕಾಂಗ್ರೆಸ್‌ ಹಿರಿಯ ಶಾಸಕ ಎಚ್.ವೈ.ಮೇಟಿ ನಿಧನ

ಎಚ್.ವೈ.ಮೇಟಿ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇಂದು ರಾತ್ರಿ 8 ಗಂಟೆಗೆ ಬಾಗಲಕೋಟೆಗೆ ಮೇಟಿ ಪಾರ್ಥಿವ ಶರೀರವನ್ನು ರವಾನೆ ಮಾಡಲಾಗುತ್ತದೆ. ರಾತ್ರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬಳಿಕ ಬೆಳಿಗ್ಗೆ ತಿಮ್ಮಾಪುರಕ್ಕೆ ಪಾರ್ಥಿವ ಶರೀರ ಶಿಫ್ಟ್‌ ಆಗಲಿದ್ದು, ಅಂತ್ಯಕ್ರಿಯೆ ನೆರವೇರಲಿದೆ.

Tags:
error: Content is protected !!