ಬೆಂಗಳೂರು: ರಾಜ್ಯ ಸರ್ಕಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಮೂಲಕ ರಾಜ್ಯದ ತೆರಿಗೆ ಹಣವನ್ನು ಹಂಚುತ್ತಿದೆ. ಇಂತಹ ಕೆಲಸವನ್ನು ರಾಜ್ಯದ ಇತಿಹಾಸದಲ್ಲಿಯೇ ಯಾವ ಪಕ್ಷವೂ ಮಾಡಿರಲಿಲ್ಲ ಎಂದು ಸರ್ಕಾರದ ವಿರುದ್ಧ ಶಾಸಕ ಜನಾರ್ಧನ ರೆಡ್ಡಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.12) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಹೆಸರಲ್ಲಿ ದಲಿತರ ಅಭಿವೃದ್ದಿ ಹಡಿದ್ದಾರೆ. ರಾಜ್ಯದ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಹೆಸರಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದರ ಫಲವನ್ನು ಕಾಂಗ್ರೆಸ್ ಅನುಭವಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಈಗ ನೀಡುತ್ತಿರುವ ಗ್ಯಾರಂಟಿಗಳ ಜೊತೆಗೆ ಇನ್ನು ಐದು ಗ್ಯಾರಂಟಿಗಳನ್ನು ಸೇರಿಸಿ ಜನತೆಗೆ ಕೊಡಲಿ ತೊಂದರೆ ಇಲ್ಲ. ಆದರೆ ಸಾರ್ವಜನಿಕರ ತೆರಿಗೆ ಹಣವನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲು ಆಕ್ಷೇಪವಿದೆ ಎಂದು ಹೇಳಿದರು.





