ಬೆಂಗಳೂರು: ಆರ್.ಅಶೋಕ್ ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್ ವಿರುದ್ಧ ನಿತ್ಯ ಆರೋಪ ಮಾಡುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ್ ಸವದಿ ವಾಗ್ದಾಳಿ ನಡೆಸಿದ್ದಾರೆ.
ನವೆಂಬರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಆಗುತ್ತಾರೆ ಎಂಬ ಆರ್.ಅಶೋಕ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಶೋಕ್ ಅವರು ವಿಪಕ್ಷ ನಾಯಕ. ಅವರು ನಿತ್ಯ ಏನಾದರೂ ಹೇಳಬೇಕು. ಇಲ್ಲದೇ ಹೋದರೆ ಮೇಲಿನವರು ಏನು ಮಲಗಿದ್ದೀರಾ ಎಂದು ಕೇಳುತ್ತಾರೆ. ಹೀಗಾಗಿ ಸುದ್ದಿಯಲ್ಲಿ ಇರಬೇಕು ಎಂದು ಈ ರೀತಿಯಾಗಿ ಹೇಳುತ್ತಾರೆ. ಅಶೋಕ್ ಅವರೇ ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ. ಅದನ್ನು ಮೊದಲು ತೆಗೆದುಕೊಳ್ಳಿ ಎಂದು ಕಿಡಿಕಾರಿದರು.