Mysore
20
scattered clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಜಾಮೀನು ಪಡೆದ ಬೆನ್ನಲ್ಲೇ ಮತ್ತೆ ಮುನಿರತ್ನ ಬಂಧನ

ಬೆಂಗಳೂರು: ಜಾತಿ ನಿಂದನೆ ಮತ್ತು ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಆತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧಿಸಿದ್ದಾರೆ.

ಆರ್‌.ಆರ್‌.ನಗರ ಬಿಜೆಪಿ ಶಾಸಕ ಮುನಿರತ್ನ ಕೆಲವು ದಿನಗಳ ಹಿಂದಷ್ಟೇ ಜಾತಿ ನಿಂದನೆ ಹಾಗೂ ಬೆದರಿಕೆ ಆರೋಪದಡಿಯಲ್ಲಿ ಜೇಲು ಸೇರಿದ್ದರು. ಆ ಕೇಸ್‌ನ ವಿಚಾರವಾಗಿ ಗುರುವಾರ ( ಸೆಪ್ಟೆಂಬರ್‌ 19 ) ಜಾಮೀನು ಪಡೆದಿದ್ದರು. ಆದರೆ, ಇದೀಗ ಅವರನ್ನು ಮತ್ತೆ ಆತ್ಯಾಚಾರ ಪ್ರಕರಣದಲ್ಲಿ ರಾಮನಗಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆಯೊಬ್ಬರು 2020 ರಿಂದ 2022ರವರೆಗೆ ಮುನಿರತ್ನ ಅವರು ತನ್ನ ಮೇಲೆ ಆತ್ಯಾಚಾರ ಎಸಗಿದ್ದಾರೆ, ಅಲ್ಲದೆ ನನಗೆ ಹೆದರಿಸುವ ಕೆಲಸವನ್ನು ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್‌ ಹಾಕಿ ಅವರನ್ನು ಬಂಧಿಸಿದ್ದಾರೆ.

 

Tags:
error: Content is protected !!