ಬೆಂಗಳೂರು: ಜಾತಿ ನಿಂದನೆ ಮತ್ತು ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಆತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧಿಸಿದ್ದಾರೆ.
ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಕೆಲವು ದಿನಗಳ ಹಿಂದಷ್ಟೇ ಜಾತಿ ನಿಂದನೆ ಹಾಗೂ ಬೆದರಿಕೆ ಆರೋಪದಡಿಯಲ್ಲಿ ಜೇಲು ಸೇರಿದ್ದರು. ಆ ಕೇಸ್‌ನ ವಿಚಾರವಾಗಿ ಗುರುವಾರ ( ಸೆಪ್ಟೆಂಬರ್ 19 ) ಜಾಮೀನು ಪಡೆದಿದ್ದರು. ಆದರೆ, ಇದೀಗ ಅವರನ್ನು ಮತ್ತೆ ಆತ್ಯಾಚಾರ ಪ್ರಕರಣದಲ್ಲಿ ರಾಮನಗಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆಯೊಬ್ಬರು 2020 ರಿಂದ 2022ರವರೆಗೆ ಮುನಿರತ್ನ ಅವರು ತನ್ನ ಮೇಲೆ ಆತ್ಯಾಚಾರ ಎಸಗಿದ್ದಾರೆ, ಅಲ್ಲದೆ ನನಗೆ ಹೆದರಿಸುವ ಕೆಲಸವನ್ನು ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್ ಹಾಕಿ ಅವರನ್ನು ಬಂಧಿಸಿದ್ದಾರೆ.
ಪಾತು ದೆಹಲಿ ನಗರ, ಹಗಲಿನ ಬೆಳಕು ನಿಧಾನಕ್ಕೆ ಕರಗಿ ಕತ್ತಲು ಇಷ್ಟಿಷ್ಟಾಗಿ ನಗರವನ್ನು ಆವರಿಸಿಕೊಳ್ಳುತ್ತಿತ್ತು, ರಸ್ತೆಗಳು ನಿರ್ಜನವಾಗುತ್ತಿದ್ದವು. ಇದೇ ಹೊತ್ತಲ್ಲಿ,…
ಅಜಯ್ ಕುಮಾರ್ ಎಂ.ಗುಂಬಳ್ಳಿ ಈಗ ಸೈಕಲ್‌ಗಳು ಅತಿವಿರಳ. ಊರಿನಲ್ಲಿ ನಾಲ್ಕೈದು ಮಂದಿ ಹಿರಿಯರು ಇನ್ನೂ ಗದ್ದೆಗೆ, ಕೆಲಸಕ್ಕೆ ಹೋಗಲು ಸೈಕಲ್…
ಫಾತಿಮಾ ರಲಿಯಾ ಕಳೆದ ಜುಲೈನಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನ ವಾರ್ವಿಕ್ ಸ್ಟ್ರೀಟ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಆಫ್ರಿಕನ್…
ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…
ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…