ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಜೈಲುಪಾಲಾಗಿದ್ದಾರೆ.
ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ವಾದ ವಿವಾದ ಆಲಿಸಿದ ನ್ಯಾಯಾಲಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ನಾಗೇಂದ್ರರನ್ನು ಆಗಸ್ಟ್.3ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಲಾಗಿದೆ.
ಈ ಮೂಲಕ ಮಾಜಿ ಸಚಿವ ನಾಗೇಂದ್ರ ಅವರು ಜೈಲು ಪಾಲಾಗಲಿದ್ದು, ಆಗಸ್ಟ್.3ರವರೆಗೆ ಜೈಲಿನಲ್ಲಿ ಕಂಬಿ ಎಣಿಸಲಿದ್ದಾರೆ.
ವಾದ ವಿವಾದದ ನಡುವೆ ನಾಗೇಂದ್ರ ಪರ ವಕೀಲ ಶ್ಯಾಮ್ ಸುಂದರ್ ಅವರು, ಆರೋಪಿ ನಾಗೇಂದ್ರಗೆ ಜಾಮೀನು ಅರ್ಜಿ ಸಲ್ಲಿಸುವುದಾಗಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಜಾಮೀನಿಗೆ ಅರ್ಜಿ ಸಲ್ಲಿಸಿ ಎಂದು ಸೂಚಿಸಿ, ನಾಗೇಂದ್ರರನ್ನು ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶ ಹೊರಡಿಸಿದೆ.