ರಾಜ್ಯ

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಪ್ರದೀಪ್‌ ಈಶ್ವರ್‌

ಬೆಂಗಳೂರು: ಜಾತಿ ಆಧರದ ಮೇಲೆ ವಿಷ ಕಾರುವ ಬಿಜೆಪಿಗರು ಇದೀಗ ತಮ್ಮ ತಮ್ಮಲ್ಲೇ ಬಡಿದಾಡಿಕೊಳ್ಳುತ್ತಿದ್ದಾರೆ. ಆದರೆ, ಅವರು ಮಕ್ಕಳೆಲ್ಲಾ ವಿದೇಶದಲ್ಲಿ ಓದುತ್ತಾರೆ. ಬಡವರ ಮಕ್ಕಳು ಬಡಿದಾಡುಕೊಂಡು ಇರಬೇಕು ಎಂಬುದೇ ಅವರ ಸಂಸ್ಕೃತಿ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ಜನರೇ ನಿಮಗೆ ಬುದ್ಧಿ ಕಲಿಸುತ್ತಾರೆ. ಭಗವದ್ಗೀತೆ ಮೇಲೆ ಚರ್ಚೆ ಮಾಡೋಣ ಬನ್ನಿ. ನಮ್ಮ ಧರ್ಮವನ್ನು ಪ್ರೀತಿಸಬೇಕು, ಅನ್ಯ ಧರ್ಮಗಳನ್ನು ಗೌರವಿಸಬೇಕು. ಆದರೆ ನಿಮ್ಮಲ್ಲೇ ದೊಡ್ಡ ಕಂದಕ ಶುರುವಾಗಿದೆ ಎಂದು ಬಿಜೆಪಿ ನಾಯಕರ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಡಾ.ಜಿ.ಪರಮೇಶ್ವರ್ರವರ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಸಂಸತ್‍ನಲ್ಲಿ ದಾಳಿ ಮಾಡಿದಂಥವರಿಗೆ ಪಾಸ್ ಕೊಟ್ಟವರು ನೀವು. ನಿನ್ನೆ ಪ್ರತಾಪ್ ಸಿಂಹ ಅವರ ಮೇಲೆ ಎಫ್‍ಐಆರ್ ಹಾಕಲಾಗಿದೆ. ಪರಮೇಶ್ವರ್ರವರ ದಮ್ಮು, ತಾಕತ್ತಿನ ಬಗ್ಗೆ ಮಾತನಾಡುತ್ತೀರಾ? ಎಂದು ಖಾರವಾಗಿ ಪ್ರಶ್ನಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಗೃಹಸಚಿವರು ಚೆನ್ನಾಗಿಯೇ ನಿರ್ವಹಿಸುತ್ತಿದ್ದಾರೆ. ಆದರೆ ವಿನಾಕಾರಣ ಪ್ರತಿಪಕ್ಷದ ನಾಯಕ ಅಶೋಕ್ ಆರೋಪಿಸುತ್ತಿದ್ದಾರೆ. ಮತ್ತೆ ಇವರನ್ನೆಲ್ಲಾ ಜನರೇ ಸೋಲಿಸುತ್ತಾರೆ. ನಮ್ಮದು ಶಿಸ್ತಿನ ಪಕ್ಷ, ಬಿಜೆಪಿ ಅಶಿಸ್ತಿನ ಪಕ್ಷವಾಗಿದೆ ಎಂದರು.

ರತ್ನಗಂಬಳಿ ಹಾಕಲು ನಾನ್ಯಾರು?

ಸಂಸದ ಡಾ.ಸುಧಾಕರ್ ಕಾಂಗ್ರೆಸ್‍ಗೆ ಬರುವ ವಿಚಾರದ ಬಗ್ಗೆ ನಿರ್ಧಾರ ಕೈಗೊಳ್ಳುವುದು ಪಕ್ಷದ ಹಿರಿಯರಿಗೆ ಬಿಟ್ಟದ್ದು. ಸ್ವಾಗತ ಮಾಡಲು ನಾನ್ಯಾರು? ನಾನೊಬ್ಬ ಸಾಮಾನ್ಯ ಮನುಷ್ಯ. ಅವರಿಗೆ ರತ್ನಗಂಬಳಿ ಹಾಕಲು ನಾನ್ಯಾರು? ನಮ್ಮ ನಾಯಕರು ಆ ಬಗ್ಗೆ ತೀರ್ಮಾನ ಮಾಡುತ್ತಾರೆ. ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ದತ್ತುಪುತ್ರ ಇದ್ದಂತೆ. ಹೀಗಾಗಿ ನನಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ದೇವಸ್ಥಾನವಿದ್ದಂತೆ

ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ. ಕೆಪಿಸಿಸಿ ದೇವಸ್ಥಾನವಿದ್ದಂತೆ. ನಾನೊಬ್ಬ ಕಸ ಗುಡಿಸುವವನಿದ್ದಂತೆ, ಹೈಕಮಾಂಡ್ ಯಾರನ್ನಾದರೂ ಅಧ್ಯಕ್ಷರನ್ನಾಗಿ ಮಾಡಲಿ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

4 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

4 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

5 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

6 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

6 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

9 hours ago