ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಕೃಷ್ಣರಾಜ ಕ್ಷೇತ್ರದ ಶಾಸಕ್ ಶ್ರೀವತ್ಸ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ.
ಬೆಂಗಳೂರಿನಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಅವರನ್ನು ಭೇಟಿ ಮಾಡಿದ ಶಾಸಕ ಶ್ರೀವತ್ಸ ಅವರು, ಸುಳ್ಳು ಹಾಗೂ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಲಕ್ಷ್ಮಣ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.




