ಬೆಂಗಳೂರು: ಲೋಕಸಭಾ ಚುನಾವಣೆ ವಸ್ತಿಲಲ್ಲಿಯೇ ಕಾಂಗ್ರೆಸ್ ಪಕ್ಷದಲ್ಲಿ ಮೇಜರ್ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೂತನ ಐದು ಜನರನ್ನು ನೇಮಕ ಮಾಡಲಾಗಿದ್ದು, ಅದರಲ್ಲಿ ಮೈಸೂರಿನ ಶಾಸಕ ತನ್ವೀರ್ ಸೇಠ್ ಸ್ಥಾನ ಪಡೆದಿದ್ದಾರೆ.
ಶಾಸಕ ತನ್ವೀರ್ ಸೇಠ್, ಜಿ.ಸಿ ಚಂದ್ರಶೇಖರ್, ವಿನಯ್ ಕುಲಕರ್ಣೀ, ಮಂಜುನಾಥ ಭಂಡಾರಿ ಮತ್ತು ವಸಂತ ಕುಮಾರ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ ಎಂದು ಹೇಳಲಾಗಿದೆ.
ಇನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ, ಪ್ರಚಾರ ಸಮಿತಿ ಕೋ ಚೇರ್ಮನ್ ಆಗಿ ಎಲ್ ಹನುಮಂತಯ್ಯ ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷಾದ್ ರನ್ನು ನೇಮಿಸಲಾಗಿದೆ.





