Mysore
24
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣ: ಚಳ್ಳಕೆರೆಯಲ್ಲಿ ಮತ್ತೆ ಇಡಿ ದಾಳಿ

kc veerendra pappy

ಬೆಂಗಳೂರು: ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಯನ್ನು ಈಗಾಗಲೇ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿರುವ ಇಡಿ ಅಧಿಕಾರಿಗಳು ಚಿತ್ರದುರ್ಗದಲ್ಲಿ ಮತ್ತೆ ದಾಳಿ ನಡೆಸಿದ್ದಾರೆ.

ಆನ್‌ಲೈನ್‌ ಬೆಟ್ಟಿಂಗ್‌ ಆಪ್‌, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ವೀರೇಂದ್ರ ಪಪ್ಪಿಯನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸಿದ್ದಾರೆ. ಈ ನಡುವೆ ಇಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಮತ್ತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಳ್ಳಕೆರೆಯ ವೀರಶೈವ ಸಹಕಾರಿ ಬ್ಯಾಂಕ್‌, ಕೋಟೆಕ್‌ ಮಹೀಂದ್ರಾ ಬ್ಯಾಂಕ್‌ನಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ವಿಚಾರಣೆ ವೇಳೆ ಸಿಕ್ಕ ಮಾಹಿತಿ ಆಧರಿಸಿ ಇಡಿ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Tags:
error: Content is protected !!