Mysore
25
haze

Social Media

ಸೋಮವಾರ, 17 ನವೆಂಬರ್ 2025
Light
Dark

ಸಚಿವ ಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ವಿನಯ್‌ ಕುಲಕರ್ಣಿ

ಬೆಳಗಾವಿ: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ ವಿನಯ್‌ ಕುಲಕರ್ಣಿ ಸಚಿವ ಸ್ಥಾನದ ಆಸೆ ಬಿಚ್ಚಿಟ್ಟಿದ್ದಾರೆ.

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ ರಚನೆ ಭಾರೀ ಚರ್ಚೆಯಲ್ಲಿದ್ದು, ಈ ಬಗ್ಗೆ ಶಾಸಕ ವಿನಯ್‌ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಪಿವೈ ಹಾಗೂ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೊಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಇದರಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ ಏನೂ ಇಲ್ಲ. ಆದರೆ ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಈ ಬಾರಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಇನ್ನು 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಸಚಿವ ಸ್ಥಾನದ ಆಸೆ ಬಿಚ್ಚಿಟ್ಟರು.

Tags:
error: Content is protected !!