ರಾಜ್ಯ

ಬಿಜೆಪಿಯಿಂದ ಉಚ್ಛಾಟನೆ| Nation First, Party next, Self last ಎಂ ತತ್ವದಲ್ಲಿ ಕೆಲಸ ಮಾಡುವೆ: ಶಾಸಕ ಯತ್ನಾಳ್‌

ಬೆಂಗಳೂರು: ನಾನು ನಮ್ಮ ಪಕ್ಷದಿಂದ ಉಚ್ಛಾಟನೆ ಮಾಡಿದರು ಸಹ Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕೆಲ ರಾಜಕೀಯ ಪಟ್ಟಭದ್ರರು, ಅಡ್ಜೆಸ್ಟ್‌ಮೆಂಟ್‌ ರಾಜಕಾರಣದ ಹರಿಕಾರರಿಂದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ ಎಂದು ಕಿಡಿಕಾರಿದ್ದಾರೆ.

ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ. ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನಂತವರಿಗೆ ಉಚ್ಚಾಟನೆ ಮಾಡುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕ ಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು ಯಾರ ‘ ಅಡ್ಜೆಸ್ಟ್‌ಮೆಂಟ್‌ ರಾಜಕಾರಣದಿಂದ’ ಎಂದು ಪಕ್ಷದ ಪ್ರಮುಖರು ವಿಶ್ಲೇಷಿಸಲಿ ಎಂದಿದ್ದಾರೆ.

ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಪ್ಪ, ಡಾ ವಿ.ಎಸ್‌.ಆಚಾರ್ಯರು ಸೇರಿದಂತೆ ಪಕ್ಷದ ಅನೇಕ ಧುರೀಣರು, ಸಾವಿರಾರು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಿದ ಪರಿಣಾಮದಿಂದಲೇ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದ್ದು. ಬಿಡಿಗಾಸಿಲ್ಲದೇ, ಕಾರ್ಯಕರ್ತರ ಓಡಾಟ, ಉಪಹಾರಕ್ಕೂ ಹಣವಿಲ್ಲದಿರುವ ಕಾಲಘಟ್ಟದಲ್ಲಿ ದಿವಂಗತ ಮಲ್ಲಿಕಾರ್ಜುನಪ್ಪನವರು ತಮ್ಮ ಸ್ವಂತ ಸಂಪನ್ಮೂಲದಿಂದ ಪಕ್ಷವನ್ನು ಮುನ್ನೆಡೆಸಿ ಕಾರ್ಯಕರ್ತರ ಮನೋಬಲವನ್ನು ಹೆಚ್ಚಿಸಿ ಸಂಘಟನೆಗೆ ಕಾರಣವಾದರು. ಮಾತು ಕಡಿಮೆಯಾದರೂ ತಮ್ಮ ಕೆಲಸದಿಂದ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಿದ್ದು ಪಕ್ಷ ಮರೆಯಲಾಗದ ಮಾಣಿಕ್ಯ ಡಾ. ವಿ.ಎಸ್.ಆಚಾರ್ಯರು. ಆಯಕಟ್ಟಿನ ಸ್ಥಾನದಲ್ಲಿದ್ದರೂ ಆಚಾರ್ಯರ ಕುಟುಂಬದವರು ಯಾರೂ ಸಹ ರಾಜಕಾರಣಕ್ಕೆ ಬರಲಿಲ್ಲ ಎಂಬುದು ಹಲವರಿಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಹಿಂದುತ್ವವಾದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ ‘ಪೂಜ್ಯ’ ರಿಂದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ, ವಾಲ್ಮೀಕಿ ಹಗರಣ, ದಲಿತರಿಗೆ SCSP/TSP ಅನುದಾನದ ದುರ್ಬಳಕೆಯನ್ನು ಖಂಡಿಸಿದ್ದು, ಹೋರಾಟ ರೂಪಿಸಿದ್ದು, ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆ.ಪಿ.ಸಿ ಅಧ್ಯಕ್ಷರಾದ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು ಎಂದು ತಿಳಿಸಿದ್ದಾರೆ.

ಪ್ರತಿ ಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆಯನ್ನು, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದು ನಾವೇ, ಕರ್ನಾಟಕ ಲೋಕ ಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದು ನಾವೇ. ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ. ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ ‘ಅಪಥ್ಯ’ ವಾಗಿದೆ ಎಂದು ವ್ಯಂಗ್ಯ ಮಾಡಿದ್ದಾರೆ.

ಅಡ್ಜೆಸ್ಟ್‌ಮೆಂಟ್‌ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು. ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

12 mins ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

28 mins ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

45 mins ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

53 mins ago

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌ ಸ್ಪಷ್ಟನೆ

ವಾಷಿಂಗ್ಟನ್:‌ ಇರಾನ್‌ ಜೊತೆ ಕದನ ವಿರಾಮ್‌ ಮಾಡಿಕೊಳ್ಳಲು ಬಯಸಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. NATO ಮಿತ್ರರಾಷ್ಟ್ರಗಳನ್ನು…

1 hour ago

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

2 hours ago