ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ತೂರಾಟ ಮಾಡಿ ಗಲಭೆಗೆ ಕಾರಣರಾದವರನ್ನು ಮುಂದಿನ 24 ಗಂಟೆಯೋಳಗೆ ಬಂಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕ್ಷುಲ್ಲಕ ಕಾರಣಕ್ಕೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಗೆ ಅನ್ಯ ಕೋಮಿನವರು ಕಲ್ಲು ತೂರಾಟ ಮಾಡಿರುವುದು ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಮಾಜಘಾತುಕ ಶಕ್ತಿಗಳನ್ನು ಹೆಡೆಮುರಿಕಟ್ಟಬೇಕಾಗಿದ್ದ ಸರ್ಕಾರ ಮತ್ತೊಮ್ಮೆ ತನ್ನ ಅಸಹಾಯಕತೆ ಹಾಗೂ ಅಸಮರ್ಥತೆ ತೋರಿಸಿದೆ. ಮೂಟೆಗಟ್ಟಲು ಕಲ್ಲು ದಾಳಿಕೋರರಿಗೆ ಹೇಗೆ ಸಿಕ್ಕವು? ಇದನ್ನು ಕೊಟ್ಟಿದ್ದು ಯಾರು? ಈ ಕೋಮು ಗಲಭೆಗೆ ಯಾರು ಕಾರಣ ಎಂದು ಸರ್ಕಾರ ಜನಸಾಮಾನ್ಯರಿಗೆ ಉತ್ತರಿಸಬೇಕು. ಹಾಗೆಯೇ, ಈ ಗಲಭೆಗೆ, ಕಲ್ಲುತೂರಾಟಕ್ಕೆ ಕಾರಣರಾದ ಮತಾಂಧರನ್ನು ಮುಂದಿನ 24 ಗಂಟೆಗಳಲ್ಲಿ ಬಂಧಿಸಿ ಜೈಲಿಗಟ್ಟಬೇಕು ಎಂದು ಒತ್ತಾಯಿಸಿದ್ದಾರೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…