ರಾಜ್ಯ

ಬಿಜೆಪಿ ಹೈಕಮಾಂಡ್‌ ನೋಟಿಸ್‌ಗೆ 6ಪುಟಗಳ ಉತ್ತರ ಸಿದ್ಧ: ಶಾಸಕ ಯತ್ನಾಳ್‌

ನವದೆಹಲಿ: ಬಿಜೆಪಿ ಹೈಕಮಾಂಡ್‌ ನೀಡಿರುವ ಶೋಕಾಸ್‌ ನೋಟಿಸ್‌ಗೆ ಆರು ಪುಟಗಳ ಉತ್ತರ ಸಿದ್ಧವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಡಿ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್‌ನಿಂದ ನನಗೆ ಬಂದಿರುವ ನೋಟಿಸ್‌ನ ಎಲ್ಲಾ ಪ್ರಶ್ನೆಗಳಿಗೂ ಸಮಗ್ರವಾಗಿ ಆರು ಪುಟಗಳ ವಿವರಣೆಯನ್ನು ಉತ್ತರದ ಮೂಲಕ ನೀಡಲಾಗುವುದು. ಆದರೆ ಹೈಕಮಾಂಡ್‌ಗೆ ನಾನು ರಾಜ್ಯ ಬಿಜೆಪಿ ಪಕ್ಷದ ಬಗ್ಗೆ ಯಾವುದೇ ರೀತಿಯ ದೂರುಗಳನ್ನು ನೀಡಿಲ್ಲ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕುಟುಂಬ ರಾಜ್ಯ ಬಿಜೆಪಿ ನಾಯಕರೊಂದಿಗೆ ಗುಂಪು ಕಟ್ಟಿಕೊಂಡಿದ್ದಾರೆ. ಈ ವಿಚಾರವಾಗಿ ಕುಟುಂಬ ರಾಜಕಾರಣದ ವಿರುದ್ಧದ ನನ್ನ ಹೋರಾಟದಲ್ಕಿ ಯಾವುದೇ ರಾಜಿ ಇಲ್ಲ. ಯಡಿಯೂರಪ್ಪರವರ ಕುಟುಂಬ ರಾಜಕಾರಣದಿಂದ ಅನೇಕರಿಗೆ ಬೇಸರ ಉಂಟಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು ತನ್ನ ತಾಯಿಯಂತೆ ಭಾವಿಸುವ ನಾಯಕರು ಪಕ್ಷಕ್ಕೆ ಬೇಕು. ನಾನು ಎಂದಿಗೂ ಬಿಜೆಪಿ ವಿರುದ್ಧ ಮಾತನಾಡಿಲ್ಲ, ಆದರೆ ನಮ್ಮ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ವರಿಷ್ಠರಿಗೆ ದೂರು ನೀಡುತ್ತೇನೆ. ರಾಜ್ಯ ಬಿಜೆಪಿಯಲ್ಲಿ ಭ್ರಷ್ಟಾಚಾರ ರಹಿತ ಕುಟುಂಬವಾದ ರಹಿತ ಪಕ್ಷವಿರಬೇಕು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

1 min ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

1 hour ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

2 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

2 hours ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

3 hours ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

3 hours ago