ವಿಜಯಪುರ: ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ನಂಟು ಹೊಂದಿರುವ ಸಚಿವರ ಬಗ್ಗೆ ನಮಗೆ ಗೊತ್ತಿದೆ. ಆ ಸಚಿವರ ಹೆಸರನ್ನು ಅಧಿವೇಶನದಲ್ಲ ಬಹಿರಂಗಪಡಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ವಿಜಯಪುರದಲ್ಲಿ ಇಂದು(ಮಾರ್ಚ್.16) ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರನ್ಯಾ ಕೇಸ್‌ನಲ್ಲಿ ನಂಟು ಹೊಂದಿರೋ ಸಚಿವರು ಯಾರು ಎಂಬುದು ನಮಗೆ ತಿಳಿದಿದೆ. ಅವರೇ ಆರೋಪಿ ರನ್ಯಾಗೆ ಪ್ರೋಟೋಕಾಲ್ ನೀಡಿದವರ ಮಾಹಿತಿ ಸಂಗ್ರಹ ಮಾಡಿದ್ದಾರೆ. ಆ ಸಚಿವರಿಗೆ ಮಾತ್ರ ಗೋಲ್ಡ್ ಎಲ್ಲಿಂದ ತಂದರು? ಅದನ್ನು ರನ್ಯಾ ಎಲ್ಲಿಟ್ಟುಕೊಂಡು ಬಂದರು ಎಂಬುದು ಸೇರಿದಂತೆ ಉಳಿದೆಲ್ಲಾ ಮಾಹಿತಿಗಳು ಗೊತ್ತಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ರನ್ಯಾ ಕೇಸ್‌ನಲ್ಲಿ ಕೇಂದ್ರದವರ ತಪ್ಪದೆ ಎಂಬ ಸಚಿವ ಲಾಡ್ ಆರೋಪದ ಬಗ್ಗೆ ಮಾತನಾಡಿದ ಅವರು, ಕೇಸ್‌ನಲ್ಲಿ ಯಾರೇ ತಪ್ಪು ಮಾಡಿದ್ದರೂ ಅದೇ ತಪ್ಪೇ ಆಗಿರುತ್ತದೆ. ನಾವು ಬಿಜೆಪಿಯನ್ನು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಆದರೆ ಕೇಂದ್ರದ ಅಧಿಕಾರಿಗಳ ತಪ್ಪಿದ್ದರೆ ಅದು ಕೂಡ ತಪ್ಪಾಗುತ್ತದೆ. ನಮ್ಮ ಕೇಂದ್ರ ಸಚಿವರು ಮಾತ್ರ ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…