Mysore
24
clear sky

Social Media

ಬುಧವಾರ, 15 ಏಪ್ರಿಲ 2026
Light
Dark

ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು: ಸಚಿವ ದಿನೇಶ್‌ ಗುಂಡೂರಾವ್‌

dinesh gundurao

ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶಾಸಕರ ಪ್ರವಾಸಕ್ಕೆ ಅಡ್ಡಿಯಿಲ್ಲ. ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಪ್ರವಾಸ ಕೈಗೊಳ್ಳುವುದಾದರೆ ಅನುಮತಿ ಬೇಕು. ಆಗ ಶಾಸಕರ ಸಂಖ್ಯಾ ಬಲ ನೋಡಿಕೊಂಡು ಅನುಮತಿ ಕೊಡಿಸಬೇಕಾಗುತ್ತದೆ ಎಂದರು.

ಶಾಸಕರು ವಿದೇಶ ಪ್ರವಾಸ ಕೈಗೊಳ್ಳುವುದರಲ್ಲಿ ವಿಶೇಷವೇನೂ ಇಲ್ಲ. ಅಧ್ಯಯನ ಪ್ರವಾಸಗಳನ್ನು ಕೈಗೊಳ್ಳುವುದು ಸಹಜ ಎಂದ ಅವರು, ವಂದೇ ಮಾತರಂ ಗೀತೆಯನ್ನು ಕಡ್ಡಾಯ ಮಾಡಿ ಜನರನ್ನು ಒಡೆಯುವ ಕೆಲಸ ಮಾಡಲಾಗುತ್ತದೆ. ಕಾಂಗ್ರೆಸ್ ಅನ್ನು ದೂಷಿಸುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಆರೋಪ ಮಾಡಿದರು. ಇನ್ನು ದೇಶಭಕ್ತಿ ಇರುವವರು ರಾಷ್ಟ್ರಗೀತೆಯನ್ನು ಹಾಡುತ್ತಾರೆ ಎಂದರು.

Tags:
error: Content is protected !!