Mysore
21
clear sky

Social Media

ಸೋಮವಾರ, 02 ಮಾರ್ಚ್ 2026
Light
Dark

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

D.K. Shivakumar is Not Someone Who Shows Off Power: Former MP D.K. Suresh

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ ಕುರಿತು ಮಾಜಿ ಸಂಸದ ಡಿ.ಕೆ.ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಿ.ಕೆ.ಸುರೇಶ್‌ ಅವರು, ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಊರಲ್ಲಿ ಇರಲಿಲ್ಲ. ಹಾಗಾಗಿ ಅದರ ಬಗ್ಗೆ ಮಾಹಿತಿ ಇಲ್ಲ. ಶಾಸಕರ ತೀರ್ಮಾನ ವೈಯಕ್ತಿಕ. ಪಕ್ಷ ಅದನ್ನು ಗಮನಿಸುತ್ತದೆ ಎಂದು ಹೇಳಿದರು.

ಇನ್ನು ನನ್ನ ನಿಲುವು ಏನು ಎಂದು ಹೇಳಿದ್ದೇನೆ. ಪದೇ ಪದೇ ಹೇಳಲು ಆಗಲ್ಲ. ಎಲ್ಲರಿಗೂ ಸಿಎಂ ಆಗುವ ಆಕಾಂಕ್ಷೆ ಇರುವುದರಲ್ಲಿ ತಪ್ಪೇನಿಲ್ಲ. ಡಿ.ಕೆ.ಶಿವಕುಮಾರ್‌ ಬೆಂಬಲಕ್ಕೆ ಶಾಸಕರ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು.

 

Tags:
error: Content is protected !!