ರಾಜ್ಯ

ಐಪಿಎಲ್‌ ಟಿಕೆಟ್‌ಗಾಗಿ ಸ್ವೀಕರ್‌ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

ಬೆಂಗಳೂರು : ರಾಜ್ಯದಲ್ಲಿ ಗ್ಯಾಸ್ ಸಿಗದೆ ಆಟೋ ಚಾಲಕರು ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದರೆ, ಜನಪ್ರತಿನಿಧಿಗಳಾದ ಶಾಸಕರು ಮಾತ್ರ ಐಪಿಎಲ್ ಟಿಕೆಟ್‌ಗಳ ಮೋಜು-ಮಸ್ತಿಯಲ್ಲಿ ಮುಳುಗಿದ್ದಾರೆ.

ನಾಳೆ (ಏಪ್ರಿಲ್ 5, 2026) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯಕ್ಕಾಗಿ ಶಾಸಕರ ಪಿಎಗಳು ವಿಧಾನಸಭೆ ಸ್ಪೀಕರ್ ಕಚೇರಿ ಮುಂದೆ ಕ್ಯೂ ನಿಂತು ಟಿಕೆಟ್ ಪಡೆಯುತ್ತಿದ್ದಾರೆ.

ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಬಗ್ಗೆ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ನಡುವೆ ಮಾತುಕತೆ ನಡೆದಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್ ವಿತರಣೆಗಾಗಿ ಸ್ಪೀಕರ್ ಕಚೇರಿಯಲ್ಲಿ ಪಿಎಗಳು ಸರದಿ ನಿಂತು ಟಿಕೆಟ್ ಪಡೆಯುತ್ತಿರುವುದು ಕಂಡುಬಂದಿದೆ.

ಜನರ ಸಮಸ್ಯೆಗಳನ್ನು ಕೇಳುವುದಕ್ಕಿಂತ ಐಪಿಎಲ್ ಟಿಕೆಟ್‌ಗಾಗಿ ತಮ್ಮ ಪಿಎಗಳನ್ನು ಕ್ಯೂ ನಿಲ್ಲಿಸುವ ಶಾಸಕರ ಈ ವರ್ತನೆ ವಿಪರ್ಯಾಸವೇ ಸರಿ. ಈಗಾಗಲೇ ಶಾಸಕರು “ನಾವು ವಿಐಪಿಗಳು, ಕ್ಯೂ ನಿಲ್ಲಲು ಸಾಧ್ಯವಿಲ್ಲ” ಎಂದು ವಿಐಪಿ ಟಿಕೆಟ್‌ಗಳ ಬೇಡಿಕೆ ಇಟ್ಟು ವಿವಾದಕ್ಕೆ ಕಾರಣವಾಗಿದ್ದರು.

ಆಂದೋಲನ ಡೆಸ್ಕ್

Recent Posts

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

9 mins ago

ಮಡಿಕೇರಿ | ಕಾರಿನ ಮೇಲೆ ಉರುಳಿ ಬಿದ್ದ ಪ್ರವಾಸಿಗರ ಬಸ್

ಮಡಿಕೇರಿ : ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ…

26 mins ago

ಎಲ್‌ಪಿಜಿ ಹೊತ್ತ ಮತ್ತೊಂದು ಹಡಗು ಭಾರತದತ್ತ

ಅನುಮತಿಗಾಗಿ ಕಾಯುತ್ತಿರುವ ಮತ್ತೆರಡು ಹಡಗುಗಳು ಹೊಸದಿಲ್ಲಿ : ಸುಮಾರು 46,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ಇಂಧನ ಹೊತ್ತ ದೊಡ್ಡ ದ್ರವೀಕೃತ…

1 hour ago

ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

4 hours ago

ಗ್ಯಾಸ್‌ ಸಿಗದೇ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ಆಕ್ರೋಶ

ಬೆಂಗಳೂರು: ಗ್ಯಾಸ್‌ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ…

4 hours ago

ರಾಜ್ಯದ ಅಭಿವೃದ್ಧಿಗೆ ಕೇಂದ್ರದ 5 ಸಚಿವರ ಕೊಡುಗೆ ಶೂನ್ಯವಾಗಿದೆ: ಸಚಿವ ಚಲುವರಾಯಸ್ವಾಮಿ ಆರೋಪ

ದಾವಣಗೆರೆ: ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುವ ಜೊತೆಗೆ ಅಭಿವೃದ್ಧಿಗೂ ಪ್ರತಿ ಕ್ಷೇತ್ರಕ್ಕೆ ನೂರು ಕೋಟಿ ರೂ.ಗಳಿಗೆ ಹೆಚ್ಚಿನ ಅನುದಾನವನ್ನು ಸಿದ್ದರಾಮಯ್ಯ ಅವರು…

4 hours ago