ಚಿಕ್ಕಮಗಳೂರು: ಆರ್‌ಆರ್‌ಎಸ್ ಹಾಗೂ ಬಿಜೆಪಿ ಪಕ್ಷವನ್ನು ವಿಷದ ಹಾವಿಗೆ ಹೋಲಿಕೆ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಈ ಬಗ್ಗೆ ಚಿಕ್ಕಮಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಹುಚ್ಚು ನಾಯಿ ಕಡಿದಂತೆ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗಳು ಅವರ ಹಿರಿತನಕ್ಕೆ ಗೌರವ ತರುವ ಮಾತುಗಳಲ್ಲ. ಈ ಹೇಳಿಕೆಗಳನ್ನು ಅವರೇ ಮಾತನಾಡಿದ್ದಾರೋ ಅಥವಾ ಅವರಿಂದ ಯಾರೋ ಹೇಳಿಸಿದ್ದಾರೋ ಗೊತ್ತಿಲ್ಲ. ಬಹುಶಃ ಅವರಿಂದ ರಾಹುಲ್ ಗಾಂಧಿ ಅಥವಾ ಸೋನಿಯಾ ಗಾಂಧಿ ಅವರೇ ಆ ಮಾತುಗಳನ್ನು ಹೇಳಿಸಿದ್ದಾರೆ ಎಂದು ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಖರ್ಗೆ ಅವರ ಹೊಡಿ, ಬಡಿ, ಕೊಲ್ಲುವುದು ಎಂಬ ಮಾತುಗಳು ತಾಲಿಬಾನಿಗಳ ಹೇಳಿಕೆಗಳಂತೆ ಅನ್ನಿಸುತ್ತಿದೆ. ಈ ಹೇಳಿಕೆಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟವರ ಹೇಳಿಕೆಗಳಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಹೇಳಿಕೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಬೇಕು ಎಂದು ಆಗ್ರಹಿಸಿದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…