Mysore
18
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಪರಿಷತ್‌ ಚನಾವಣೆ: ಕೈ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಬಿ.ಫಾರಂ ವಿತರಿಸಿದ ಡಿ.ಕೆ ಶಿವಕುಮಾರ್‌

ಬೆಂಗಳೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮರಿತಿಬ್ಬೇಗೌಡ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಇಂದು (ಮೇ.೧೨) ಕೆಪಿಸಿಸಿ ಕಚೇರಿಯಲ್ಲಿ ಬಿ.ಫಾರಂ ವಿತರಿಸಿದರು.

ಈ ಬಾರಿಯೂ ಅತ್ಯಧಿಕ ಮತಗಳಿಂದ ಗೆದ್ದು ಬನ್ನಿ ಎಂದು ಇದೇ ವೇಳೆ ಡಿ.ಕೆ ಶಿವಕುಮಾರ್‌ ಅವರು ಮರಿತಿಬ್ಬೇಗೌಡರಿಗೆ ಶುಭ ಕೋರಿದರು.

ಈ ಸಂಧರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮರಿತಿಬ್ಬೇಗೌಡ ಅವರು ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಐದನೇ ಬಾರಿಗೆ ಕಣಕ್ಕಿಳಿಯುತ್ತಿದ್ದು ಮೇ 14ರ ಮಂಗಳವಾರ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ.

Tags:
error: Content is protected !!