Mysore
15
broken clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

MLC Elections: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಆಯ್ಕೆ

maritibbegowda

ಬೆಂಗಳೂರು: ಜೂನ್‌ 3ರಂದು ನಡೆಯಲಿರುವ ಈಶಾನ್ಯ – ನೈಋತ್ಯ ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ – ನೈಋತ್ಯ ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ವಿಧಾನ ಪರಿಷತ್‌ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮರಿತಿಬ್ಬೇಗೌಡ ಅವರನ್ನು ಘೋಷಿಸಿದೆ.

ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ಮಾಹಿತಿ ನೀಡಿದ್ದಾರೆ.

ಇನ್ನು ನಿನ್ನೆ ( ಮೇ 11 ) ಬಿಜೆಪಿ 5 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯನ್ನು ಪ್ರಕಟಿಸದೇ ಅದನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿತ್ತು. ಬಿಜೆಪಿಯಿಂದ ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರ್‌ನಾಥ್‌ ಪಾಟೀಲ್‌, ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ ನಾರಾಯಣ ಸ್ವಾಮಿ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ ನಿಂಗರಾಜು ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಜೆಪಿ ತನ್ನ ಪ್ರಕಟಣೆಯಲ್ಲಿ ತಿಳಿಸಿತ್ತು.

Tags:
error: Content is protected !!