ಬೆಂಗಳೂರು: ಜೂನ್ 3ರಂದು ನಡೆಯಲಿರುವ ಈಶಾನ್ಯ – ನೈಋತ್ಯ ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ – ನೈಋತ್ಯ ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮರಿತಿಬ್ಬೇಗೌಡ ಅವರನ್ನು ಘೋಷಿಸಿದೆ.
ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ಮಾಹಿತಿ ನೀಡಿದ್ದಾರೆ.
ಇನ್ನು ನಿನ್ನೆ ( ಮೇ 11 ) ಬಿಜೆಪಿ 5 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯನ್ನು ಪ್ರಕಟಿಸದೇ ಅದನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿತ್ತು. ಬಿಜೆಪಿಯಿಂದ ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರ್‌ನಾಥ್ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ ನಾರಾಯಣ ಸ್ವಾಮಿ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ ನಿಂಗರಾಜು ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಜೆಪಿ ತನ್ನ ಪ್ರಕಟಣೆಯಲ್ಲಿ ತಿಳಿಸಿತ್ತು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…