Mysore
67
scattered clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಎಫ್‌ಐಆರ್‌ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ಎಂಎಲ್‌ಸಿ ರವಿಕುಮಾರ್‌

MLC Ravikumar moves High Court challenging FIR

ಬೆಂಗಳೂರು: ಎಫ್‌ಐಆರ್‌ ಪ್ರಶ್ನಿಸಿ ಎಂಎಲ್‌ಸಿ ರವಿಕುಮಾರ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ರವಿಕುಮಾರ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ತುರ್ತು ವಿಚಾರಣೆ ನಡೆಸುವಂತೆ ಪರ ವಕೀಲರು ಮನವಿ ಮಾಡಿದ್ದು, ಮನವಿ ಪರಿಗಣಿಸಿರುವ ಹೈಕೋರ್ಟ್‌ ಇಂದು ಮಧ್ಯಾಹ್ನದ ಬಳಿಕ ವಿಚಾರಣೆಗೆ ಸಮ್ಮತಿ ನೀಡಿದೆ.

ಸಿಎಸ್‌ ಶಾಲಿನಿ ರಜನೀಶ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ರವಿಕುಮಾರ್‌ ವಿರುದ್ಧ ಜೆ.ಪಿ.ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರವಿಕುಮಾರ್‌ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

Tags:
error: Content is protected !!