ರಾಜ್ಯ

ಎಂಎಲ್‌ಸಿ ರವಿಕುಮಾರ್‌ ನಿಮ್ಹಾನ್ಸ್‌ನಲ್ಲಿ ಇರಬೇಕು: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಎಂಎಲ್‌ಸಿ ರವಿಕುಮಾರ್‌ ಬುದ್ಧಿ ಸರಿಯಿಲ್ಲ, ಹಾಗಾಗಿ ಅವರು ನಿಮ್ಹಾನ್ಸ್‌ನಲ್ಲಿ ಇರಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ರವಿಕುಮಾರ್‌ ಮೂಲತಃ ಬಿಜೆಪಿಯವರಲ್ಲ, ಆರ್‌ಎಸ್‌ಎಸ್‌ನಿಂದ ಬಂದವರು. ಮನುಸ್ಮೃತಿ ಹಿನ್ನೆಲೆಯಿಂದ ಬಂದಿದವರಾಗಿದ್ದಾರೆ. ಮನುಸ್ಮೃತಿಯಲ್ಲಿ ಮಹಿಳೆಯರ ಬಗ್ಗೆ ಏನು ಹೇಳಲಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ನಾಯಕರು ಸಂಸ್ಕೃತಿ ಬಗ್ಗೆ ಹೇಳುತ್ತಾರೆ. ಆದರೆ ಅವರ ಪಕ್ಷದ ನಾಯಕರಿಗೆ ಯಾವುದೂ ಅನ್ವಯವಾಗುತ್ತಿಲ್ಲ ಎಂದು ಕಿಡಿಕಾರಿದರು.

ರವಿಕುಮಾರ್‌ ಆಡಿದ ಮಾತುಗಳು ವಿಡಿಯೋದಲ್ಲಿಯೇ ರೆಕಾರ್ಡ್‌ ಆಗಿದೆ. ಇದಕ್ಕಿಂತ ಸಾಕ್ಷಿಯೇನು ಬೇಕು? ಇದು ಅವರ ಮನಃಸ್ಥಿತಿ ತೋರಿಸುತ್ತಿದೆ. ಕೊಳಕು ಮನಸ್ಸು, ಅವರ ಕೊಳಕು ಬುದ್ಧಿ, ಕೊಳಕು ನಾಲಿಗೆ ಇದನ್ನೆಲ್ಲಾ ಹೇಳಿಸುತ್ತಿದೆ. ಅಂದರೆ ಅವರ ಬುದ್ಧಿ ಸರಿಯಿಲ್ಲ ಎಂದರ್ಥ. ಹಾಗಾಗಿ ಅವರು ನಿಮ್ಹಾನ್ಸ್‌ಗೆ ಹೋಗಬೇಕು. ಮಹಿಳೆಯರಿಗೆ ಗೌರವ ಕೊಡಬೇಕು ಎಂಬುದು ಗೊತ್ತಿಲ್ಲ. ಮಾತಿನ ಮೇಲೆ ಹಿಡಿತವಿಲ್ಲ ಎಂದ ಮೇಲೆ ಅವರು ಹುಚ್ಛಾಸ್ಪತ್ರೆಯಲ್ಲಿರುವುದೇ ಸೂಕ್ತ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

7 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

8 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

8 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

9 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

9 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

15 hours ago