ರಾಜ್ಯ

ಜೈಲಿನಿಂದ ಬಿಡುಗಡೆಯಾದ ಬಳಿಕ ಎಂಎಲ್‌ಸಿ ಸೂರಜ್‌ ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಕಳೆದ ಕೆಲ ದಿನಗಳಿಂದ ಜೈಲು ಪಾಲಾಗಿ ಇಂದು ಬಿಡುಗಡೆಯಾಗಿರುವ ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದು, ನಮ್ಮನ್ನು ರಾಜಕೀಯವಾಗಿ ಕುಗ್ಗಿಸುವ ಷಡ್ಯಂತ್ರ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಸೂರಜ್‌ ರೇವಣ್ಣ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದರು. ನಿನ್ನೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಸೂರಜ್‌ ರೇವಣ್ಣ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣ ಅವರು, ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ತೇಜೋವಧೆ ಮಾಡುವ ದುರುದ್ದೇಶದಿಂದಲೇ ನನ್ನ ಮೇಲೆ ಕೇಸ್‌ ದಾಖಲಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇದು ಕೇಸ್‌ ಅಲ್ಲ ಷಡ್ಯಂತ್ರ. ಶಿವಕುಮಾರ್‌ ನನ್ನ ಆಪ್ತ ಸಹಾಯಕನಲ್ಲ, ಕಾರು ಚಾಲಕನೂ ಅಲ್ಲ. ನಮಗೆ ಲೋಕೇಶ್‌ ಅಂತಾ ಒಬ್ಬನೇ ಕಾರು ಚಾಲಕ ಇರೋದು. ರಾಜಕೀಯವಾಗಿ ನಮ್ಮನ್ನು ಕುಗ್ಗಿಸುವ ಷಡ್ಯಂತ್ರವಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇರಾನ್‌ನ ಭದ್ರತಾ ಮುಖ್ಯಸ್ಥ ಹತ್ಯೆ : ಇಸ್ರೆಲ್‌

ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್‌ ರಕ್ಷಣಾ…

22 mins ago

SSLC EXAM | ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…

56 mins ago

ಕಾಬೂಲ್‌ ಆಸ್ಪತ್ರೆ ಮೇಲೆ ಪಾಕ್‌ ದಾಳಿ : 400 ಮಂದಿ ಸಾವು; ಭಾರತ ಖಂಡನೆ

ಕಾಬೂಲ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌…

1 hour ago

ಶಿವಾಲಿಕ್‌ ಬಳಿಕ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ಗೆ ಆಗಮನ

ಅಹಮದಬಾದ್‌ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.‌17) ತಲುಪಿರುವುದಾಗಿ ವರದಿಯಾಗಿದೆ.…

1 hour ago

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

2 hours ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

3 hours ago