Mysore
19
broken clouds

Social Media

ಭಾನುವಾರ, 11 ಜನವರಿ 2026
Light
Dark

ಮನರೇಗಾ | ಬಹಿರಂಗ ಚರ್ಚೆಗೆ ನಾವು ಸಿದ್ಧ : ಡಿಸಿಎಂ ಡಿಕೆಶಿ

ಬೆಂಗಳೂರು : ಮನರೇಗಾ ವಿಚಾರವಾಗಿ ಬಹಿರಂಗ ಚರ್ಚೆ ಮಾಡುವ ವಿರೋಧ ಪಕ್ಷಗಳ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ಅವರು ಯಾವಾಗ ಬೇಕಾದರೂ ಯಾವುದೇ ವೇದಿಕೆಯಲ್ಲಾದರೂ ಚರ್ಚೆ ಬರಲಿ, ನಾನು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿದರು.

ಅರಮನೆ ಮೈದಾನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಮನರೇಗಾ ವಿಚಾರವಾಗಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ನಾವು ಅದನ್ನು ತೀರ್ಮಾನ ಮಾಡುತ್ತೇವೆ. ವಿರೋಧ ಪಕ್ಷದವರು ಚರ್ಚೆಗೆ ಸಿದ್ಧ ಎಂದಿದ್ದಾರೆ. ಅವರು ಯಾವುದೇ ಮಾಧ್ಯಮ ವೇದಿಕೆಯಲ್ಲಾದರೂ, ಯಾವಾಗ ಕರೆದರೂ ನಾನು ಚರ್ಚೆಗೆ ಬರುತ್ತೇನೆ” ಎಂದರು.

*ಕುಮಾರಸ್ವಾಮಿ ಚರ್ಚೆಗೆ ಬಂದರೆ ಬಹಳ ಒಳ್ಳೆಯದು, ನಾನು ಸ್ವಾಗತಿಸುವೆ:*

ಕುಮಾರಸ್ವಾಮಿ ಅವರು ಚರ್ಚೆಗೆ ಬರುತ್ತಾರಂತೆ ಎಂದು ಕೇಳಿದಾಗ, “ನಾನು ಅವರನ್ನು ಸ್ವಾಗತಿಸುತ್ತೇನೆ. ಮೊದಲು ಅವರು ಬಂದರೆ ಬಹಳ ಒಳ್ಳೆಯದು. ಬಿಜೆಪಿ ರಾಜ್ಯ ಅಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಕುಮಾರಸ್ವಾಮಿ ಯಾರು ಬೇಕಾದರೂ ಬರಲಿ. ಅವರ ಪಂಥಾಹ್ವಾನ ಸ್ವೀಕಾರ ಮಾಡಿದ್ದೇನೆ. ಸಾರ್ವಜನಿಕ ವೇದಿಕೆ, ಅಧಿವೇಶನ ಅಥವಾ ಮಾಧ್ಯಮ ವೇದಿಕೆಯಾದರೂ ಸರಿ. ಚರ್ಚೆಗೆ ನಾನು ಸಿದ್ಧ” ಎಂದರು.

*ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆಯುವ ಕುಮಾರಸ್ವಾಮಿ ಮಾತು ಗಂಭೀರವಲ್ಲ:*

ಸಿದ್ದರಾಮಯ್ಯ ಅವರನ್ನು ಲೀಸ್ಡ್ ಸಿಎಂ ಎಂಬ ಕುಮಾರಸ್ವಾಮಿ ಟೀಕೆ ಬಗ್ಗೆ ಕೇಳಿದಾಗ, “ಅವರ ಮಾತನ್ನು ನಾವು ಗಂಭೀರವಾಗಿ ಪರಿಗಣಿಸುವುದಿಲ್ಲ. ಮೊದಲಿನಿಂದ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆದು ಹೋಗುವುದನ್ನು ನೋಡಿದ್ದೇವೆ. ಅವರ ಟೀಕೆಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡುತ್ತಾರೆ. ಆ ಸಾಮರ್ಥ್ಯ ಅವರಿಗಿದೆ. ಬಹಿರಂಗ ಚರ್ಚೆಗೆ ಯಾವಾಗ ಸಮಯ ನಿಗದಿ ಮಾಡುತ್ತೀರಾ ಹೇಳಿ. ಇವತ್ತು ಸಂಜೆಯಿಂದಲೇ ಚರ್ಚೆಗೆ ಸಿದ್ಧ. ನರೇಗಾ ವಿಚಾರದಲ್ಲಿ ನನಗೆ ಚರ್ಚೆ ಮಾಡಲು ಯಾವ ತಯಾರಿಯೂ ಬೇಕಾಗಿಲ್ಲ. ಎಲ್ಲಾ ಮಾಹಿತಿಗಳು ನನ್ನ ಬೆರಳ ತುದಿಯಲ್ಲಿವೆ. ಬೇರೆ ಎಲ್ಲೂ ಹೋಗಬೇಕಿಲ್ಲ. ನರೇಗಾ ಯೋಜನೆಯಲ್ಲಿ ನಮ್ಮ ಕನಕಪುರ ತಾಲ್ಲೂಕಿನಲ್ಲಿ ಎಷ್ಟು ಕೆಲಸ ಆಗಿದೆ ಎಂದು ನಮಗೆ ಗೊತ್ತಿದೆ. ನರೇಗಾ ಯೋಜನೆ ಜಾರಿಯಲ್ಲಿ ಕನಕಪುರ ನಂಬರ್ 1 ಎಂದು ಬಿಜೆಪಿಯ ಕೇಂದ್ರ ಸರ್ಕಾರ ಪ್ರಶಸ್ತಿ ನೀಡಿದೆ. ಈ ವಿಚಾರ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿಜಯೇಂದ್ರ ಅವರಿಗೆ ಗೊತ್ತಿದೆಯೋ ಇಲ್ಲವೋ. ನಮ್ಮ ತಾಲ್ಲೂಕಿನಲ್ಲಿ ಅವ್ಯವಹಾರ ಆಗಿದೆಯೇ ಇಲ್ಲವೇ ಎಂದು ಕೇಂದ್ರ ಸರ್ಕಾರ ಹತ್ತು ತಂಡ ಕಳುಹಿಸಿ ತನಿಖೆ ಮಾಡಿಸಿದೆ” ಎಂದು ತಿಳಿಸಿದರು.

ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಎಂಟ್ರಿ ನೀಡುತ್ತಾರೆ ಎಂಬ ಬಗ್ಗೆ ಕೇಳಿದಾಗ, “ರಾಜ್ಯ ರಾಜಕಾರಣ ಮಾತ್ರ ಯಾಕೆ ಹಳ್ಳಿಯಿಂದಲೇ ರಾಜಕಾರಣ ಮಾಡಲಿ” ಎಂದು ತಿಳಿದರು.

ಒಕ್ಕಲಿಗ ಉದ್ಯಮಿ ಕಾರ್ಯಕ್ರಮದ ಬಗ್ಗೆ ಕೇಳಿದಾಗ, “ಯುವ ಒಕ್ಕಲಿಗ ಉದ್ಯಮಿಗಳನ್ನು ಸೇರಿಸಿ ಉತ್ತೇಜನ ನೀಡಲಾಗುತ್ತಿದೆ. ಇಲ್ಲಿ ಉದ್ಯಮಿಗಳು ಪರಸ್ಪರ ಸೇರಿದ್ದಾರೆ. ನಾನು ಇಲ್ಲಿರುವ ಉದ್ಯಮಿಗಳ ಬಗ್ಗೆ ಮಾಹಿತಿ ಪಡೆದೆ.ಅವರು ಬಹಳ ಶ್ರಮ ಪಡುತ್ತಿದ್ದಾರೆ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲ ಇದೆ. ಅವರಿಗೆ ಶುಭ ಹಾರೈಸುತ್ತಿದ್ದೇನೆ” ಎಂದು ತಿಳಿಸಿದರು.

Tags:
error: Content is protected !!