ಬೆಂಗಳೂರು: ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ.
‘ನಿರಂತರ’ ಯೋಜನೆಯಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಹಾಜರಾತಿಯನ್ನು ಕೃತಕ ಬುದ್ಧಿಮತ್ತೆ ಚಾಲಿತ, ಮುಖ ಚಹರೆ ಗುರುತು ಆಧಾರಿತವಾಗಿ ತೆಗೆದುಕೊಳ್ಳಲಾಗುತ್ತದೆ.
ಇದನ್ನೂ ಓದಿ: ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಿಸಿ : ಗಡಿಜಿಲ್ಲೆಯಲ್ಲಿ ಪೋಷಕರಿಂದ ಪ್ರತಿಭಟನೆ
ಸುಮಾರು 5 ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ಕರ್ನಾಟಕ ಸ್ಟೇಟ್ ಡೇಟಾ ಸೆಂಟರ್ ಮೂಲಕ ನಿರ್ವಹಣೆ ಮಾಡಲಾಗುತ್ತದೆ. ಇದಕ್ಕಾಗಿ ಸಾಫ್ಟ್‌ವೇರ್ ಕೂಡ ಸಿದ್ಧಪಡಿಸಲಾಗುತ್ತಿದೆ. ಇದು ಗರಿಷ್ಠ ಗೌಪ್ಯತೆ ಮತ್ತು ಸುರಕ್ಷತೆ ಕಾಪಾಡುತ್ತದೆ. ಪ್ರಸಕ್ತ ವರ್ಷದಿಂದಲೇ ಇ-ಹಾಜರಾತಿ ಜಾರಿಗೆ ಬರಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.





